Saturday, September 21, 2024
Google search engine
Homeಉದ್ಯೋಗಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ

ಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆ

ಗದಗ : .20; ಲಕ್ಕುಂಡಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಜಾಗತಿಕ ಪಾರಂಪರಿಕ ಸ್ಥಳ ಎಂದು ಗುರುತಿಸುವಂತೆ ಮಾಡಲು ನಾವೆಲ್ಲ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಲಕ್ಕುಂಡಿ ಪ್ರದೇಶದಲ್ಲಿ ಈಗಾಗಲೇ ಪ್ರವಾಸೊದ್ಯಮ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭೂಮಿ ಪೂಜೆಯನ್ನು ಇತ್ತೀಚೆಗೆ ನೆರವೇರಿಸಲಾಗಿದೆ. ಸರ್ಕಾರ ಲಕ್ಕುಂಡಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಿದೆ. ಸಾರ್ವಜನಿಕರ ಸಹಕಾರವೂ ಸಹ ಅಗತ್ಯವಾಗಿದೆ ಎಂದರು.

ಲಕ್ಕುAಡಿ ಐತಿಹಾಸಿಕವಾಗಿ ಬಹಳ ವಿಶಿಷ್ಟವಾಗಿದೆ.ಇತ್ತೀಚೆಗೆ ಲಕ್ಕುಂಡಿಯಲ್ಲಿ ಬೌದ್ಧ ಶಾಸನ ದೊರೆತಿದ್ದು ಇತಿಹಾಸವನ್ನು ಸಾರಿ ಹೇಳುತ್ತಿವೆ. ಲಕ್ಕುಂಡಿ ಇತಿಹಾಸ ಕುರಿತಂತೆ ಪುಸ್ತಕಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಆಗಿಲ್ಲ. ಲಕ್ಕುಂಡಿ ಇತಿಹಾಸವನ್ನು ನಾವುಗಳೇ ಅರಿತು ಇನ್ನೊಬ್ಬರಿಗೆ ನಮ್ಮತನವನ್ನು ಪಸರಿಸುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರವು ನೀಡಿದ ಅನುದಾನವನ್ನು ಅನಗತ್ಯವಾಗಿ ಮನಬಂದAತೆ ವ್ಯಯಿಸಲು ಅವಕಾಶವಿಲ್ಲ. ಪ್ರತಿ ರೂಪಾಯಿಯೂ ಮೌಲ್ಯಯುತ ಕಾರ್ಯಕ್ಕೆ ಬಳಕೆಯಾಗಬೇಕು. ವಿನಾಕಾರಣ ಅಪವ್ಯಯ ಸಹಿಸಲಾಗದು ಎಂದು ಸಂಬAಧಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಭಿವೃದ್ಧಿ ಮತ್ತು ಉತ್ಖನನದ ವೇಳೆ ದೊರೆತ ಶಾಸನ ಶಿಲೆ ವಿಗ್ರಹಗಳಿಗೆ ಧಕ್ಕೆಯಾಗದಂತೆ ನಿಖರವಾಗಿ ಮೂಲ ವಿಗ್ರಹ ದೇವಸ್ಥಾನಗಳಿಗೆ ಧಕ್ಕೆಯಾಗದಂತೆ ಪ್ರಾಚ್ಯ ವಸ್ತು ಇಲಾಖೆಯ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಲಕ್ಕುಂಡಿ ಅದ್ಭುತ ಇತಿಹಾಸ ಅನಾವರಣಗೊಳಿಸುವ ಮೂಲಕ ಜಗತ್ತಿಗೆ ತೋರ್ಪಡಿಸುವ ಕಾರ್ಯ ಆಗಬೇಕಿದೆ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಪ್ರತಿ ಮೂರು ತಿಂಗಳಿಗೆ ಒಂದು ಸಲ ಮಾಡಬೇಕೆಂದು ಸೂಚಿಸಿದರು. .

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯಕ್ಕೆ 250 ಕೋಟಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹಣ ಮೀಸಲಿದೆ. ಲಕ್ಕುಂಡಿ ಅಭಿವೃದ್ಧಿಗಾಗಿ ಅಗತ್ಯವಿರುವ ಡಿಪಿಆರ್ ಸಿದ್ಧಪಡಿಸಿ ಶೀಘ್ರವೇ ಸಲ್ಲಿಸುವ ಮೂಲಕ ಅನುಮೋದನೆ ಪಡೆಯುವಂತೆ ಸಚಿವ ಎಚ್.ಕೆ.ಪಾಟೀಲ ಅವರು ಸೂಚಿಸಿದರು.

ಶಾಸಕ ಸಿ.ಸಿ.ಪಾಟೀಲ ಮಾತನಾಡಿ ಲೊಕೋಪಯೋಗಿ ಇಲಾಖೆಯಲ್ಲಿ ಉತ್ತಮ ಆರ್ಕೆಟಿಕ್ ವಿಭಾಗ ಕಾರ್ಯನಿರ್ವಹಿಸುತ್ತಿದ್ದು ಅವರ ಸಹಕಾರದೊಂದಿಗೆ ಉತ್ತಮ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬಹುದಾಗಿದೆ. ಲಕ್ಕುಂಡಿ ಇತಿಹಾಸ ಪರಂಪರೆ ನಾಡಿನುದ್ದಕ್ಕೂ ಪಸರಿಸಲು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.

ಸಭೆಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿದ್ದು ಪಾಟೀಲ,ಅ.ದ. ಕಟ್ಟಿಮನಿ ಸೇರಿದಂತೆ ಲಕ್ಕುಂಡಿ ಗ್ರಾ.ಪಂ. ಸದಸ್ಯರು, ಸಾಹಿತಿ ಪುಂಡಲೀಕ ಕಲ್ಲಿಗನೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಸಿಇಓ ಭರತ್ ಎಸ್, ಪುರಾತತ್ವ ಇಲಾಖೆಯ ಆಯುಕ್ತ ದೇವರಾಜ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ, ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ