14.7 C
New York
Friday, May 9, 2025

Buy now

spot_img

ಗದಗ : ಯುವಕರು  ದೇಶ ಸುತ್ತಿ ಕೋಶ ಓದಿ ಜ್ಞಾನ ಅನುಭವ ಸಂಪಾದಿಸಿ  ಪರಿಪೂರ್ಣ ವ್ಯಕ್ತಿತ್ವ ನಿರ್ಮಿಸಿಕೊಳ್ಳಿ:ಎಚ್ ಕೆ ಪಾಟೀಲ

ವಿಶ್ವ ಪ್ರವಾಸೋದ್ಯಮ ದಿನಾಚರಣೆ-2024

ಗದಗ ಸಪ್ಟೆಂಬರ್27:ಯುವಕರು ದೇಶ ಸುತ್ತಿ ಕೋಶ ಓದಿ ಅದರಿಂದ ಜ್ಞಾನ ಅನುಭವ ಹೊಂದಿ ವ್ಯಕ್ತಿತ್ವವನ್ನು ಪಕ್ವಗೊಳಿಸಿಕೊಳ್ಳಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.

ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ,ಎನ್ ಎಸ್ ಎಸ್ ಇವರುಗಳ ಸಹಯೋಗದಲ್ಲಿ ಜರುಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ಪ್ರವಾಸೋದ್ಯಮ ಅಂಗವಾಗಿ ಐತಿಹಾಸಿಕ ಗದುಗಿನ ವೀರನಾರಾಯಣ ದೇವಸ್ಥಾನ ಅದ್ದೂರಿಯಾಗಿ ಆಚರಿಸಲಾಗುತ್ತಿದೆ,ಕೆಲವು ಜನರ ಆಲೋಚನೆಯಂತೆ ಪ್ರವಾಸೋದ್ಯಮದಿಂದ ಆಧಾಯ ಮತ್ತು ಉದ್ಯೋಗ ಸೃಷ್ಟಿ ಆಗುತ್ತದೆ,ಇನ್ನೂ ಕೆಲವರು ಪ್ರವಾಸೋದ್ಯಮ ಅಂದರೆ ಮನರಂಜನೆಯ ಕ್ಷೇತ್ರ ಎಂದು ಹೇಳುತ್ತಾರೆ,ನಿಜವಾಗಿ ನಮ್ಮ ಹಿರಿಯರು ಹೇಳಿದಂತೆ ದೇಶ ಸುತ್ತಿ ಕೋಶ ಓದಿದಾಗ ಮಾತ್ರ  ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ ಆಗುತ್ತದೆ ಎಂದು ಹೇಳಿದರು.

ಪ್ರವಾಸ ಮಾಡುವುದರಿಂದ ಅಲ್ಲಿರುವ ದೃಶ್ಯ ವನ್ನು ನೋಡಿದಾಗ  ನಮಗೆ ಅರಿವಿಲ್ಲದೆ ಜ್ಞಾನ,ಅನುಭವ ಬರುತ್ತದೆ ಹಾಗಾಗಿ, ಸಾವಿರಾರು ವರ್ಷಗಳ ಹಿಂದೆ ನಮ್ಮ ಹಿರಿಯರು ಸೃಷ್ಟಿಸಿರುವ ಶಿಲ್ಪಕಲೆಯೂ ಮುಚ್ಚಿ ಹೋಗಿದೆ,  ಹೊಯ್ಸಲ ದೊರೆ ವಿಷ್ಣುವರ್ಧನ ಕಾಲದಲ್ಲಿ  ಗದುಗಿನ ವೀರನಾರಾಯಣ,ಬೇಲೂರಿನ ಚೆನ್ನಕೇಶವ,ನಂದಿ ನಾರಾಯಣ ಹಾಗೇಯೇ ರಾಷ್ಟ್ರಕೂಟ ಮತ್ತು ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಿಸಿದ ಲಕ್ಕುಂಡಿ ಒಂದು ಕಾಲದಲ್ಲಿ ವೈಭವದಿಂದ ಮೆರದಿತ್ತು ಹಾಗಾಗಿ ಅದು ಅಜರಾಮರವಾಗಿ ಉಳಿಯಬೇಕಿತ್ತು,ಆದರೆ ನಮ್ಮ ಪರಿಸ್ಥಿತಿ, ಮತ್ತು ಮನಸ್ಥಿತಿ ಅನುಗುಣವಾಗಿ ಎಲ್ಲವೂ ಬದಲಾಯಿಸಿದ್ದೆವೆ.ಇಂದು ನಾವು ಎಲ್ಲರು ಜಾಗೃತರಾಗಿ ಮೂಲ ದೇವಾಲಯ, ವಾಸ್ತುಶಿಲ್ಪವನ್ನು ಉಳಿಸಿಕೊಂಡು ಅದಕ್ಕೆ ಗೌರವ ನೀಡಿ ಉಳಿದವರಿಗೂ ಗೌರವ ಬರುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು.

ವೀರನಾರಾಯಣ ದೇವಸ್ಥಾನದ ಮೂಲ ಮಂಟಪದರಲ್ಲಿರುವ ಶ್ರೇಷ್ಠ ಶಿಲಾ ಕೃತಿ,ವಾಸ್ತುಶಿಲ್ಪ ಗಮನಿಸಿದಾಗ ಪ್ರೀತಿ ಗೌರವ ಮೂಡುತ್ತದೆ,ಹಾಗಾಗಿ ನಮ್ಮ ಐತಿಹಾಸಿಕ ಹಿನ್ನೆಲೆ ಉಳಿಯಬೇಕು,ಹಾಗಾಗಿ ಪ್ರವಾಸೋದ್ಯಮ ನೀತಿಯಲ್ಲಿ ಹೊಸದಾಗಿ ಬದಲಾವಣೆ ಮಾಡಿ ಶಾಲಾ ಕಾಲೇಜು ಮಕ್ಕಳಿಗೆ ಪ್ರವಾಸ ಮಾಡಲು ಹೆಚ್ಚು ಅವಕಾಶ ಸೃಷ್ಟಿಸಿ ಮಕ್ಕಳ ವ್ಯಕ್ತಿತ್ವ ನಿರ್ಮಾಣ ಸಹಾಯಕವಾಗುತ್ತದೆ ಎಂದರು.

ನಮ್ಮ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಗೆ   ಸೇರಿಸಬೇಕೆಂದು ಕೂಗು ಕೇಳಿಬರುತ್ತಿದ್ದು ಆದಷ್ಟು ಬೇಗವೆ ಯುನೆಸ್ಕೋ ಪಟ್ಟಿಗೆ ಸೇರುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಗದುಗಿನ ಕಪ್ಪತ್ತಗುಡ್ಡ ಅತ್ಯಂತ ಶುದ್ಧ ಗಾಳಿ ಹೊಂದಿ ಹಸಿರಿನಿಂದ ಕೂಡಿ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ,ಅಂತಹ ಪರಿಸರದಲ್ಲಿ ಸಮಯ ಕಳೆಯುವುದರಿಂದ ಮನಸ್ಸು ಶಾಂತವಾಗುತ್ತದೆ ಎಂದು ನುಡಿದರು.

ಕರ್ನಾಟಕ ಖನಿಜ ಅಬಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಮಾತನಾಡಿ ಈ ಪ್ರವಾಸೋದ್ಯಮ ದಿನಾಚರಣೆಯ ಮೂಲಕ ಜಗತ್ತಿನಲ್ಲಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಇರಬೇಕು ಎಂದು ಸೂಚಿಸಲಾಗುತ್ತಿದೆ ಎಂದರು.

ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವಾರಿ ರಾಜರು,ಮಠಾಧೀಶರು ಸೇರಿದಂತೆ ಸಾಕಷ್ಟು ಮಹನೀಯರ ಕೊಡುಗೆ ನೀಡಿದ್ದಾರೆ,ನಮ್ಮ ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳಿಗೆ ವಿಶೇಷ ಕಾಳಜಿ ವಹಿಸಿ ಅದನ್ನು ಉಳಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಅದರ ಪರಿಚಯ ಮಾಡಬೇಕು ಎಂದು ನುಡಿದರು.

ಶಿರಹಟ್ಟಿಯ ಎಫ್ ಎಂ ಡಬಾಲಿ ಪಿ.ಯು.ಕಾಲೇಜ್ ಉಪನ್ಯಾಸಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಅವರು ಕಾರ್ಯಕ್ರಮದಲ್ಲಿ ಮಾತನಾಡಿ ದೇಶದ ಅಭಿವೃದ್ಧಿ ಯನ್ನು ವಿವಿಧ ಆಯಾಮಗಳಲ್ಲಿ ನೋಡುತ್ತಾರೆ ಅದರಲ್ಲಿ  ಪ್ರವಾಸೋದ್ಯಮವು ಅತ್ಯಂತ ಪ್ರಮುಖ ಪಾತ್ರ ಹೊಂದಿದೆ,ಪ್ರವಾಸೋದ್ಯದಿಂದ ಮನಸ್ಸಿಗೆ ನೆಮ್ಮದಿ ಸಂತೋಷ  ನೀಡಿ ಜೀವನದಲ್ಲಿ ವಿಶೇಷ ಅನುಭವ ನೀಡುತ್ತದೆ ಎಂದು ಹೇಳಿ ಪ್ರವಾಸೋದ್ಯಮ.  ಮತ್ತು ಶಾಂತಿ ಕುರಿತು  ಸುದಿರ್ಘವಾಗಿ ವಿಶೇಷ ಉಪನ್ಯಾಸ ನೀಡುವರು.

ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಕುರಿತು ಬರೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ,ಶ್ರೀ ವೀರನಾರಾಯಣ ಮತ್ತು ತ್ರಿಕೂಟೇಶ್ವರ ದೇವಸ್ಥಾನ ಸಮಿತಿ ಕಾರ್ಯದರ್ಶಿ ಆನಂದ ಪೊತ್ನೀಸ್,
ಬಿ ಬಿ ಅಸೂಟಿ,ಕೆಡಿಪಿ ಸಮಿತಿಯ ಸದಸ್ಯ ಎಸ್ ಎನ್ ಬಳ್ಳಾರಿ,ಅಶೋಕ ಮಂದಾಲಿ ,ಲಕ್ಕುಂಡಿ ಪ್ರಾಧಿಕಾರದ ಸದಸ್ಯ ಸಿದ್ದು ಪಾಟೀಲ ಎನ್ ಎಸ್ ಎಸ್ ನೂಡಲ್ ಅಧಿಕಾರಿ  ವಿ ಎಸ್ ಕೊಳ್ಳಿ ಗಣ್ಯರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ಯ .ವಿಭೂತಿ ಅವರು  ಸರ್ವರಿಗೂ ಸ್ವಾಗತಿಸಿದರು,ಉಪನ್ಯಾಸಕ ಬಾಹುಬಲಿ ಜೈನ ಅವರು ಕಾರ್ಯಕ್ರಮ ನಿರ್ವಹಿಸಿದರು.

 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ