Friday, October 18, 2024
Google search engine
Homeಆರೋಗ್ಯಗದಗ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ – 2024

ಗದಗ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ – 2024

ಗದಗ  ಸೆಪ್ಟೆಂಬರ್ 30: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾನಿರತ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ – 2024 ಯನ್ನು “ ಘನತೆಯ ಬಾಳಿನೊಂದಿಗೆ ವಯೋಪಕ್ವತೆ ; ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ“ ಘೋಷ ವಾಕ್ಯದೊಂದಿಗೆ ಅಕ್ಟೋಬರ್ 01 ರಂದು ಬೆಳಿಗ್ಗೆ 11 ಘಂಟೆಗೆ ಗದಗ ಜಿಲ್ಲಾಡಳಿತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷಿö್ಮÃ ಹೆಬ್ಬಾಳಕರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಸಂಸದರಾದ ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ ಅವರು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ ಆಗಮಿಸುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಸರ್ವರಿಗೂ ಸ್ವಾಗತ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ