Friday, October 18, 2024
Google search engine
Homeಉದ್ಯೋಗಗದಗ : ವಿವಿಧ ಅರ್ಜಿಗಳ ಆಹ್ವಾನ

ಗದಗ : ವಿವಿಧ ಅರ್ಜಿಗಳ ಆಹ್ವಾನ

ವಿವಿಧ ಅರ್ಜಿಗಳ ಆಹ್ವಾನ

ಗದಗ ಅಕ್ಟೊಬರ್ 9: ರೋಣ ಪುರಸಭೆಯ ಡೇ-ನಲ್ಕ ಯೋಜನೆಯಡಿ ಸಮುಧಾಯ ಸಂಪನ್ಮೂಲ ವ್ಯಕ್ತಿ (ಸಿ.ಆರ್.ಪಿ.) ಹುದ್ದೆಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಗದಗ ಇವರಿಂದ ಅರ್ಜಿ ಅಹ್ವಾನಿಸಲು ಹೊರಡಿಸಿದ ಆದೇಶದನ್ವಯ ಮಹಿಳಾ ಅಭ್ಯರ್ಥಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ರೋಣ ಪುರಸಭೆಯ ಡೇ ನಲ್ಕ ವಿಭಾಗದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಡೇ ನಲ್ಕ ವಿಭಾಗದಲ್ಲಿ ಸಂಪರ್ಕಿಸಬಹುದಾಗಿದೆ.

ರೈತ ಬಾಂದವರ ಗಮನಕ್ಕೆ

ಗದಗ ಅಕ್ಟೊಬರ್9: 2024-25ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಸ್ಪರ್ಧೆಗೆೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ಆನ್‌ಲೈನ್‌ನಲ್ಲಿ ನೋಂದಾಯಿಸಿ. ಸಿಟಿಜನ್ ಲಾಗಿನ್ ಅಥವಾ ರೈತ ಸಂಪರ್ಕ ಕೇಂದ್ರದ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ,ಸೇವಾ ಕೇಂದ್ರ,ಸ್ವತಃ, ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ-ಕಿಸಾನ್ ಪೋರ್ಟಲ್‌ನÀಡಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ.(ಫ್ರೂಟ್ಸ್ ಐಡೆಂಟಿಫಿಕೇಶನ್)ಯನ್ನು ಬಳಸಿಕೊಂಡು ಕಡಲೆ ಬೆಳೆಗೆ ನವೆಂಬರ್ 30 ರೊಳಗೆ kkisan.karnataka.gov.in ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಲು ಜಂಟಿ ಕೃಷಿ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಆಹ್ವಾನ

ಗದಗ ಅಕ್ಟೋಬರ್ 09: 2024-25 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಗಳನ್ನು ಪಡೆದು ಅಕ್ಟೋಬರ್ 28 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08372- 238345 ರ ಮೂಲಕ ಸಂಪರ್ಕಿಸಬಹುದಾಗಿದೆ.

ತರಬೇತಿಯ ಶಿಬಿರಗಳ ವಿವರ ಈ ಕೆಳಗಿನಂತಿದೆ.

ಹೊಲಿಗೆ ತರಬೇತಿ (20 ದಿನಗಳು)07-11-2024 ರಿಂದ 26-11-2024 ರವರೆಗೆಎಸ್. ಎಸ್.ಎಲ್. ಸಿ(ಪಾಸ್/ಫೇಲ್)ಕನಿಷ್ಠ 18 ವರ್ಷ ಗರಿಷ್ಟ 40 ವರ್ಷ ವಯೋಮಿತಿ ಹೊಂದಿರಬೇಕು.ತರಬೇತಿಯು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಿಡಿಯೋಗ್ರಾಫಿ ತರಬೇತಿ ಶಿಬಿರ (12 ದಿನಗಳು) 15-11-2024 ರಿಂದ 26-11-2024 ರವರೆಗೆದ್ವಿತೀಯ ಪಿ.ಯು.ಸಿ.(ಪಾಸ್/ಫೇಲ್) ಕನಿಷ್ಠ 18 ವರ್ಷ, ಗರಿಷ್ಟ 40 ವರ್ಷ ವಯೋಮಿತಿ ಹೊಂದಿರಬೇಕು ತರಬೇತಿಯು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಗಮನಕ್ಕೆ

ಗದಗ ಅಕ್ಟೊಬರ್ 09 : 2024-25 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸಪ್ಟೆಂಬರ್ 24 ಮತ್ತು 25 ರಂದು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣ ಆಯೋಜಿಸಲಾಗಿತ್ತು.

 ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳು ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪ್ರಯಾಣಭತ್ಯೆಯನ್ನು ಪಾವತಿಸಬೇಕಾಗಿರುತ್ತದೆ. ಗದಗ ಜಿಲ್ಲೆಯಿಂದ ಭಾಗವಹಿಸಿದ ಕ್ರೀಡಾಪಟುಗಳು ತಮ್ಮ ಆಧಾರ ಕಾರ್ಡ, ಬ್ಯಾಂಕ ಪಾಸ್ಬುಕ್ ಜೇರಾಕ್ಸ ಪ್ರತಿ ಹಾಗೂ ಆಯಾ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು ನೀಡಿದ ಹಾಜರಾತಿಯನ್ನು ಅಕ್ಟೋಬರ್ 14ರೊಳಗಾಗಿ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಾರ್ಯಾಲಯಕ್ಕೆ ಒದಗಿಸಲು ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ