Friday, October 18, 2024
Google search engine
Homeಆರೋಗ್ಯಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಗದಗ ಅಕ್ಟೋಬರ್16: ವಿದ್ಯಾರ್ಥಿಗಳಿಗೆ ಪೋಷಕರಿಂದ ವಿದ್ಯಾಬ್ಯಾಸಕ್ಕೆ ಸಂಬAಧಿಸಿದ ಒತ್ತಡ ಹೆಚ್ಚುವಿರುತ್ತದೆ ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಿ ಒಳ್ಳೆಯ ವ್ಯಕ್ತಿತ್ವ ನಿರ್ಮಿಸಿಕೊಳ್ಳಬೇಕು ಎಂದು ಶಾಸಕರಾದ ಡಾ|| ಚಂದ್ರು ಲಮಾಣಿ ಹೇಳಿದರು.

ನಗರದ ಆರ್ ಡಿ ಪಿಆರ್ ವಿದ್ಯಾಲಯದಲ್ಲಿ ಬುಧವಾರ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ ವಿಭಾಗ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಗದU,À ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯ, ಗ್ರಾಮ ಗಂಗೋತ್ರಿ ಕ್ಯಾಂಪಸ್ ನಾಗಾವಿ, ಗದಗದಲ್ಲಿ ಪ್ರೊ. ಸುರೇಶ ವಿ. ನಾಡಗೌಡರ ಕುಲಪತಿಗಳು(ಪ್ರಭಾರ) ಮತ್ತು ಕುಲಸಚಿವರು ಕ.ರಾ.ಗ್ರಾ. ಮತ್ತು ಪಂ.ರಾ. ವಿಶ್ವವಿದ್ಯಾಲಯ, ಗದಗ ಇವರ ಅಧ್ಯಕ್ಷತೆಯಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024” ಅಂಗವಾಗಿ ಕಾರ್ಯಕ್ರಮ ಜರುಗಿತು, ಸದರಿ ಕಾರ್ಯಕ್ರಮವನ್ನು ಸನ್ಮಾನ್ಯ ಡಾ|| ಚಂದ್ರು ಲಮಾಣಿ ಮಾನ್ಯ ಶಾಸಕರು (ವಿಧಾನಸಭೆ) ಶಿರಹಟ್ಟಿ ಇವರು ಉದ್ಘಾಟನೆ ಮಾಡಿದರು.

 ಈ ಹಿಂದೆ ಸುಮಾರು 10 ವರ್ಷದ ಮುಂಚೆ ಮನೋವೈದ್ಯರ ಬಗ್ಗೆ ಜನರಲ್ಲಿ ಬೇರೆ ಭಾವನೆ ಇತ್ತು ಇವತ್ತಿನ ದಿನದಲ್ಲಿ ಮನೋವೈದ್ಯರ ಪ್ರಾಮುಖ್ಯತೆ ಹೆಚ್ಚಾಗಿದೆ ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬರು ಹಲವಾರು ಒತ್ತಡಗಳಿಂದ ಬಳಲುತ್ತಿದ್ದಾರೆ ಒತ್ತಡವಿಲ್ಲದವರು ಪುಣ್ಯವಂತರು,. ಇತ್ತಿಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿರುವ ಕಾರಣ ಪ್ರತಿ ಶಾಲಾ ಕಾಲೇಜುಗಳಲ್ಲಿ ಆಪ್ತ ಸಮಾಲೋಚನೆ ಕೇಂದ್ರಗಳನ್ನು ತೆರೆದು ಸೇವೆ ನೀಡಬೇಕು ಹಾಗೂ ವಿದ್ಯಾರ್ಥಿಗಳು ಆಪ್ತಸಮಾಲೋಚನೆ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿ, ಎಲ್ಲರೂ ಮಾನಸಿಕವಾಗಿ ಸದೃಡರಾಗಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ||ಎಸ್.ಎಸ್.ನೀಲಗುಂದ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿ ವರ್ಷ ಅಕ್ಟೋಬರ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳವ ಪ್ರಮುಖ ಉದ್ದೇಶವನ್ನು ತಿಳಿಸಿ, ದೇಶದ ಬೆಳವಣಿಗೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ ವಿದ್ಯಾರ್ಥಿಗಳು ಭಾವನೆಗಳನ್ನು ಸಮರ್ಪಕವಾಗಿ ನಿರ್ವಹಿಸಿದರೆ ಉತ್ತಮ ವ್ಯಕ್ತಿತ್ವ ಹೊಂದಿ ಅತ್ಯುತ್ತಮವಾದ ಜೀವನ ನಡೆಸಬಹುದು ಎಂದು ತಿಳಿಸಿ, ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಕುರಿತು ಸಮಾಜದಲ್ಲಿ ಅರಿವು ಮೂಡಿಸಿರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ|| ಫಕೀರಪ್ಪ ಗಾಣಿಗೇರ ಮನೋವೈದ್ಯರು ಮನೋವೈದ್ಯಕೀಯ ವಿಭಾಗ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ಇವರು ಉಪನ್ಯಾಸ ನೀಡಿ ಮಾನಸಿಕ ಖಾಯಿಲೆಗಳು ಬರಲು ಕಾರಣ, ಗುರುತಿಸುವುದು ಹೇಗೆ ಹಾಗೂ ಮಾನಸಿಕವಾಗಿ ಸಧೃಡರಾಗಲು ಬೇಕಾಗುವ ಕೌಶಲ್ಯಗಳ ಕುರಿತು ಸವಿವರವಾಗಿ ಉಪನ್ಯಾಸ ನೀಡಿದರು.

ಆರ್ ಡಿ ಪಿಆರ್ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ. ಸುರೇಶ ವಿ. ನಾಡಗೌಡರ ಮಾತನಾಡಿ ದೈಹಿಕ ಆರೋಗ್ಯಕ್ಕೆ ಮಾನಸಿಕ ಆರೋಗ್ಯ ಅತ್ಯವಶ್ಯಕವಾಗಿದೆ ಪ್ರತಿಯೊಬ್ಬರು ಮಾನಸಿಕವಾಗಿ ಸದೃಡರಾಗಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಒತ್ತಡಕ್ಕೆ ಮುಖ್ಯವಾದ ಕಾರಣ ಅತೀ ಆಸೆಗಳು ಆಗಿರುತ್ತವೆ ಆಸೆಗಳನ್ನು ಕಡಿಮೆ ಮಾಡಿಕೊಳ್ಳಬೇಕೆಂದು ತಿಳಿಸಿ ಅತ್ಯುತ್ತಮವಾದ ಕಾರ್ಯಕ್ರಮವನ್ನು ನಮ್ಮ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಅಕ್ಬರ ಸಾಬ ಬಬರ್ಜಿ, ನಾಗಾವಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸುರೇಶ ಪೋಮಪ್ಪ ಪವಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ|| ರಾಜೇಂದ್ರ ಸಿ. ಬಸರಿಗಿಡದ ತಾಲೂಕಾ ಆರೋಗ್ಯ ಅಧಿಕಾರಿಗಳು,ಡಾ|| ಪ್ರೀತ ಖೋನಾ, ಡಾ|| ವರ್ಷಾ ಅಂಗಡಿ ಮನೋವೈದ್ಯರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಮ್. ಎಚ್. ಕಂಬಳಿ (ಡಿ.ವಾಯ್.ಪಿ.ಸಿ.) ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಗೀತಾ ಕಾಂಬಳೆ, ಶ್ರೀಮತಿ ಪುಷ್ಪಾ ಪಾಟೀಲ ಶ್ರೀ ಶ್ರೀಧರ ಎಮ್ ಸಿ., ಶ್ರೀ ವಿನಾಯಕ ಕಾಳಿ, ಶ್ರೀ ವಿನಾಯಕ ವಾಗಮೋರೆ, ಕು.ಶೋಭಾ ವಡ್ಡರ, ಕು.ನೂತನ ಹೊಸಮನಿ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

 ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ರೂಪಸೇನ ಚವ್ಹಾಣ ರವರು ಸ್ವಾಗತಿಸಿದರು, ಉಪನ್ಯಾಸಕಿ ಶ್ರೀಮತಿ ನಾಗರತ್ನ ನಾಯ್ಕ ರವರು ನಿರೂಪಿಸಿದರು, ಪ್ರಾರ್ಥನೆಯನ್ನು ವಿದ್ಯಾರ್ಥಿನಿಯರಾದ ಕು. ಕಾವ್ಯಾ ಮತ್ತು ಕು. ದೀಪಾ ನೆರೆವೆರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ