ಗದಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ (PSI Post) ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ದೀಪಾವಳಿಗೂ ಮುನ್ನವೇ ಭರ್ಜರಿ ಉಡುಗೊರೆ ಸಿಕ್ಕಿದೆ.
ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಪ್ರತಿಭಾವಂತ ಯುವಕ ಶಿವಕುಮಾರ ಬಸವರಾಜ ಉಮ್ಮಣವರ ಪ್ರಸಕ್ತ ಪಿಎಸ್ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟಗೊಂಡಿದ್ದು, ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದು ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ. ಕುಟುಂಬಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ.