18.2 C
New York
Saturday, June 28, 2025

Buy now

spot_img

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 3 ನೇ ವರ್ಷದ ಪುಣ್ಯ ಸ್ಮರಣೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಗಲಿ ಮೂರು ವರ್ಷಗಳು ಉರುಳಿವೆ. 3ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿಗೆ ಅವರು ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ

2021ರ ಅ.29ರಂದು ಪುನೀತ್ ಅವರ ಅಕಾಲಿಕ ನಿಧನ ಅಭಿಮಾನಿಗಳನ್ನು ಒಳಗೊಂಡಂತೆ ಇಡೀ ಕನ್ನಡ ಚಿತ್ರರಂಗವನ್ನು ಆಘಾತಕ್ಕೆ ದೂಡಿತ್ತು. ಇದಾಗಿ 3 ವರ್ಷ ಕಳೆದಿದ್ದು, ಅವರ ಸಮಾಧಿಗೆ ಭೇಟಿ ನೀಡುವ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news