ಗದಗ. ನ.೩: ಮೈಸೂರ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಗದಗಿನಲ್ಲಿನ ಸರ್ಕಾರಿ ವಸ್ತು ಸಂಗ್ರಹಾಲಯದ ಒಳಾಂಗಣ ವಿನ್ಯಾಸ ಕಾಮಗಾಲಿಯ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿತು.
ರೂ. 6.97 ಕೋಟಿ ವೆಚ್ಚದಲ್ಲಿ ಸರ್ಕಾರಿ ವಸ್ತು ಸಂಗ್ರಹಾಲಯದ ಒಳಾಂಗಣ ವಿನ್ಯಾಸ ಕಾಮಗಾಲರಿಯ ಭೂಮಿ ಪೂಜೆ ಹಾಗೂ ಶಿಲಾನ್ಯಾಸವನ್ನು ರವಿವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ಶಾಸಕರಾದ ಸಲೀಂ ಅಹ್ಮದ, ಬಿ.ಬಿ.ಅಸೂಟಿ, ಸಿದ್ದು ಪಾಟೀಲ, ಅ.ದ.ಕಟ್ಟಿಮನಿ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜ ಎ ಸೇರಿದಂತೆ ಹಲವರು ಹಾಜರಿದ್ದರು.