15.7 C
New York
Friday, May 9, 2025

Buy now

spot_img

ಗದಗ : ಗ್ರಾ.ಪಂ.ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ /ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ : ವೇಳಾ ಪಟ್ಟಿ ಪ್ರಕಟ

ಗದಗ  ಆದೇಶದನ್ವಯ ಗದಗ ಜಿಲ್ಲೆಯ ಲಕ್ಕುಂಡಿ-2, ಕೊಂಚಿಗೇರಿ, ರಣತೂರ, ವಡವಿ, ಇಟಗಿ, ಡಂಬಳ, ಕದಾಂಪೂರ, ಕೊತಬಾಳ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ಅಧಿಸೂಚನೆ ಹೊರಡಿಸುವ ದಿನಾಂಕ ನವೆಂಬರ್ 6 ಆಗಿದ್ದು ನವೆಂಬರ್ 12 ರೊಳಗೆ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ನವೆಂಬರ್ 13 ರಂದು ಪರಿಶೀಲಿಸಲಾಗುವುದು. ನವೆಂಬರ್ 15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದ್ದು ಮತದಾನವನ್ನು ನವೆಂಬರ್ 23 ರಂದು ಬೆ. 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮತಗಳ ಎಣಿಕೆಯು ನವೆಂಬರ್ 26 ರಂದು ಬೆ 8 ಗಂಟೆಯಿAದ ನಡೆಯಲಿದ್ದು ಅದೇ ದಿನ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ನವೆಂಬರ್ 6 ರಿಂದ ಜಾರಿಯಲ್ಲಿ ಬರಲಿದ್ದು ನವೆಂಬರ್ 26 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ