ಗದಗ ನ 14 : ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಚಿರತೆ ಕಾಣೆಸಿಕೊಂಡಿದು ಸ್ಥಳಿಯ ಜನರು ಭಯಭೀತರಾಗಿದ್ದಾರೆ.
ಈ ಹಿಂದೆ ಕೂಡ ಬಿಂಕದಕಟ್ಟಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಚಿರತೆ ಕುಳಿತು ಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಂದು ಕೂಡ ಮನೆಗೆ ಅಳವಡಿಸಿದ ಸಿ ಸಿ ಟಿವಿಯಲ್ಲಿ ಚಿರತೆ ಪ್ರತ್ಯಕ್ಷ ಆದ ವಿಡಿಯೋ ಸೆರೆಯಾಗಿದೆ ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದಿನಾಂಕ : 14/11/2024 ರ ಸಂಜೆ 7 ಗಂಟೆಗೆ ಸುಮಾರಿಗೆ ಚಿರತೆ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಆರಾಮದಾಯಕವಾಗಿ ವಿಶ್ರಾಂತಿ ರೀತಿಯಲ್ಲಿ ಚಿರತೆ ಕಂಡು ಬಂದಿದ್ದು, ಚಿರತೆಯ ವಿಡಿಯೋವನ್ನು ತಮ್ಮ ಮನೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಇನ್ನು, ಅರಣ್ಯ ಇಲಾಖೆಯ ಅಧಿಕಾರಿಗಳು ಪೋಲಿಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.