14.4 C
New York
Friday, May 9, 2025

Buy now

spot_img

ಗದಗ : ಅವಕಾಶ ವಂಚಿತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಇಲಾಖಾ ಅಧಿಕಾರಿಗಳು ಶ್ರಮಿಸಿ

ಅಲೆಮಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗದಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ಗದಗ ಡಿ. 9 : ಅವಕಾಶ ವಂಚಿತ ಪ.ಜಾ ಮತ್ತು ಪ.ಪಂ ಅಲೆಮಾರಿ ಸಮದಾಯದವರಿಗೆ ಶಿಕ್ಷಣ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸರ್ವತೋಮುಖ ಅಭಿವೃದ್ಧಿಗೆ ಇಲಾಖಾ ಅಧಿಕಾರಿಗಳು ವಿಶೇಷ ಕಾಳಜಿಯಿಂದ ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಾಗು ಜಿಲ್ಲಾ ಅನುಷ್ಠಾನ ಸಮಿತಿಯ ಜಂಟಿ ಸಭೆ ಮತ್ತು ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ.ಜಾ ಮತ್ತು ಪ. ಪಂ. ಅಲೆಮಾರಿ ಅಭಿವೃದ್ಧಿ ನಿಗಮವು ಗದಗ ಜಿಲ್ಲೆಯಲ್ಲಿ ಡಿಸೆಂಬರ್ 7 ರಿಂದ 9 ರವರೆಗೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು ಜಿಲ್ಲೆಯ ಅಲೆಮಾರಿ ಸಮುದಾಯದವರನ್ನು ಭೇಟಿ ನೀಡಿದಾಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಗ್ರಾಮದ ಗಂಟಿಚೋರ್ ಜನಾಂಗದವರಿಗೆ ಸ್ಮಶಾನ ಭೂಮಿ ಅಭಿವೃಧ್ಧಿ , ನಿವೇಶನ ಸಮಸ್ಯೆ , ಜಾತಿ ಪ್ರಮಾಣ ಪತ್ರ, ನೂಲಿ ಚಂದಯ್ಯನವರ ಭವನ ಮಂಜೂರಾತಿ, ವಯಸ್ಕರ ಶಿಕ್ಷಣ ಕುರಿತು ಸಮಸ್ಯೆಗಳು ಕಂಡು ಬಂದಿದ್ದು ಹಾಗೂ ಲಕ್ಷ್ಮೇಶ್ವರ ಪಟ್ಟಣದ ಇಂದಿರಾ ನಗರದಲ್ಲಿ ಪ.ಜಾತಿಯ ಬುಡ್ಲ ಜಂಗಮ್ ಸಮುದಾಯದ ಕುಟುಂಬಗಳಿಗೆ ನಿವೇಶನ ಲಭ್ಯವಿದ್ದು ಮನೆ ಕಟ್ಟಿಸುವುದು, ಚೆನ್ನದಾಸರ ಸಮುದಾಯದ ಕುಟುಂಬಗಳಿಗೆ ನಿವೇಶನ, ಸುಡುಗಾಡ ಸಿದ್ಧರ ಸಮುದಾಯದವರಿಗೆ ನಿವೇಶನ ಒದಗಿಸುವ ಕುರಿತು ಸ್ಥಳೀಯ ಶಾಸಕರ ಗಮನಕ್ಕೆ ತರಲಾಗಿದೆ ಎಂದರು.

ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು. 

ಅದಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ ನಿವೇಶನ ಸಮಸ್ಯೆ ಇರುವವರಿಗೆ ಹತ್ತಿರದಲ್ಲಿರುವ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ನೀಡಲಾಗುವುದು ಹಾಗು ಈಗಾಗಲೇ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಜಾತಿ ಪ್ರಮಾಣ ಪತ್ರದ ಸಮಸ್ಯೆ ಕುರಿತು ಈಗಾಗಲೇ ಸಭೆಗಳು ಜರುಗಿದ್ದು ತಾಂತ್ರಿಕ ತೊಂದರೆಗಳನ್ನು ಸರಿಪಡಿಸಿ ಕೊಂಡು ಸರಿಯಾದ ಮಾರ್ಗ ಕಂಡುಕೊಳ್ಳಲು ತಹಶಿಲ್ದಾರರಿಗೆ ಸೂಚಿಸಲಾಗುವುದು ಎಂದರು.

ನಂತರ ಮಾತನಾಡಿದ ನಿಗಮದ ಅಧ್ಯಕ್ಷರು ನರಗುಂದ ಪಟ್ಟಣದ ಹರಿಣಿ ಶಿಕಾರಿ ಸಮುದಾಯದವರಿಗೆ ನಿವೇಶನಗಳ ಸಮಸ್ಯೆಯಿದೆ. ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಮಹಿಳೆಯರಿಗೆ ಶೌಚಾಲಯದ ಸಮಸ್ಯೆ ಇದ್ದು ಈ ಕುರಿತು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಈ ಜನರಿಗೆ ಶುಚಿತ್ವದ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ಪುರಸಭೆ ವತಿಯಿಂದ ನೀರಿಗೆ ನಳದ ಸೌಲಭ್ಯ ಈಗಾಗಲೇ ಇದ್ದು ಶುದ್ಧ ನೀರು ಒದಗಿಸಲು ಕ್ರಮವಹಿಸಲಾಗುವದು ಮಹಿಳೆಯರಿಗೆ ಗೌರವ ಘಟಕ ನಿರ್ಮಿಸಲು ಕ್ರಮವಹಿಸಲಾಗುವುದು ಹಾಗು ವಯಸ್ಕರ ಶಿಕ್ಷಣಾ ಇಲಾಖೆಯಿಂದ ಶಿಕ್ಷಣ ಪಡೆಯಲು ಇಚ್ಛಿಸುವ ಎಲ್ಲರಿಗೂ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪ.ಜಾ ಪ.ಪಂ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರು ಮಾತನಾಡಿ ನರೇಗಲ್ ಪಟ್ಟಣದ ಸಿಂಧೋಳು ಸಮುದಾಯದವರ 55 ಕುಟುಂಬಗಳು ಇದ್ದು ಅದರಲ್ಲಿ 11 ಮನೆಗಳು ನಿರ್ಮಾಣವಾಗಿದ್ದು ಉಳಿದವರಿಗೆ ಬೇರೆ ಕಡೆ ನಿವೇಶನದ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ಸೌಲಭ್ಯ ಹಾಗೂ ರಸ್ತೆ ಸಂಪರ್ಕ ಸೇರಿದಂತೆ ಇಲ್ಲಿನ ಜನರಿಗೆ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ ಹಾಗೂ ರೇಶನ್ ಕಾರ್ಡ ಸಮಸ್ಯೆಗಳಿದ್ದು ಆದಷ್ಟು ಶೀಘ್ರ ಪರಿಹರಿಸಬೇಕಾಗಿದೆ. ಮೇವುಂಡಿ ಗ್ರಾಮದ ಬುಡ್ಲ ಜಂಗಮ ಸಮುದಾಯದ ಒಟ್ಟು 13 ಕುಟುಂಬಗಳಿದ್ದು 4 ಕುಟುಂಬಗಳಿಗೆ ಮನೆಗಳಿದ್ದು 9 ಕುಟುಂಬಗಳಿಗೆ ಮನೆಗಳಿರುವುದಿಲ್ಲ. ಅವರ ವಸತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಜಾತಿ ಪ್ರಮಾಣ ಪತ್ರ ದ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದರು.

ಇದಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ ನಿವೇಶನ ಕುರಿತು ಹತ್ತಿರದಲ್ಲಿಯೇ ಸರ್ಕಾರಿ ಭೂಮಿಯನ್ನು ಗುರುತಿಸಲಾಗುವುದು, ಸರ್ಕಾರಿ ಜಾಗವು ದೂರವಾದಲ್ಲಿ ಹತ್ತಿರದಲ್ಲಿರುವ ಖಾಸಗಿ ಜಮೀನು ನೀಡುವವರಿದ್ದರೆ ಅವರಿಗೆ ನಿಯಮಗಳನ್ವಯ ದರನಿಗದಿ ಮಾಡಿ ಖರೀದಿಸು ಮುಂದಾಗುತ್ತೆವೆ ಹಾಗೂ ಮೂಲ ಭೂತ ಸೌಲಭ್ಯಗಳಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಮಾತನಾಡಿ ಮುಂಡರಗಿ ಪಟ್ಟಣದ ಕುಂಚಿ ಕೊರವ ಸಮುದಾಯದವರ 35 ಕುಟುಂಬಗಳು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು 28 ಜನರ ಅರ್ಜಿಗಳು ಆಯ್ಕೆಯಾಗಿದ್ದು ಶೀಘ್ರದಲ್ಲಿ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುವುದು. ಮನೆ ನಿರ್ಮಾಣ ,ಕುಡಿಯುವ ನೀರು ಮತ್ತು ಬೀದಿದೀಪದ ಸಮಸ್ಯೆ, ವಯಸ್ಕರ ಶಿಕ್ಷಣ ಕುರಿತಂತೆ ಕ್ರಮ ವಹಿಸಬೇಕು ಎಂದರು.

ಇದ್ದಕೆ ಪ್ರತಿಕ್ರಿಯೆಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮುಂಡರಗಿಯಲ್ಲಿ ಈಗಾಗಲೇ ಜಮೀನು ಲಭ್ಯವಿದ್ದು ಹಾಗು ಈ ಹಿಂದೆ ಫಲಾನುಭವಿಗಳ ಪಟ್ಟಿಯೂ ತಯಾರಾಗಿತ್ತು, ಫಲಾನುಭವಿಗಳ ಪಟ್ಟಿ ಸರಿಯಿಲ್ಲ ಎಂದು ವಿರೋಧ ವ್ಯಕ್ತವಾಗಿದ್ದರಿಂದ ಹೊಸ ಪಟ್ಟಿಯ ಪ್ರಕ್ರೀಯೆ ನಡೆಯುತ್ತಿದೆ ಎಂದು ತಿಳಿಸಿದರು.

ನಿಗಮದ ಅಧ್ಯಕ್ಷರು ಮಾತನಾಡಿ ಮುಂಡರಗಿ ತಾಲೂಕು ಕೊರ್ಲಹಳ್ಳಿ ಗ್ರಾಮದ ಶಿಳ್ಳೇಕ್ಯಾತ ಸಮುದಾಯದವರು ಮೀನುಗಾರಿಕೆ ಕೆಲಸ ನಿರ್ವಹಿಸುತ್ತಿದ್ದು ಸರ್ಕಾರದಿಂದ ಅವರಿಗೆ ವಿಮೆ ಸೌಲಭ್ಯ ದೊರೆಯುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಮೀನುಗಾರಿಗೆ ಮಾಡುವವರಿಗೆ ಈಗಾಗಲೇ ಮೀನುಗಾರಿಕೆ ಇಲಾಖೆಯಿಂದ ವಿಮೆಯ ಸೌಲಭ್ಯವಿದ್ದು ಕನಿಷ್ಟ ವಂತಿಕೆಯನ್ನು ಪಾವತಿಸಿ ವಿಮೆಯನ್ನು ಪಡೆಯಬಹುದಾಗಿದೆ ಎಂದು ನುಡಿದರು.

ಸರ್ಕಾರದ ಹಾಗೂ ಸಾರ್ವಜನಿಕರ ನಡುವೆ ಕೊಂಡಿಯಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದು ಸಮಾಜದ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಆ ಸಮುದಾಯವರಿಗೆ ಶಿಕ್ಷಣ ಒದಗಿಸುವ ಕಡೆಗೆ ಹೆಚ್ಚಿನ ಆದ್ತೆ ನೀಡಬೇಕು ಎಂದು ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಗಮದ ವಿಶೇಷ ಅಧಿಕಾರಿ ಆನಂದ ಏಕಲವ್ಯ, ನಗರಸಭೆ‌‌ ನಾಮನಿರ್ದೇಶಿತ ಸದಸ್ಯ ದುರ್ಗೇಶ ವಿಭೂತಿ, ಜಿಲ್ಲಾ ಅಲೆಮಾರಿ ಅನುಷ್ಟಾನ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಹುಲ್ಲೇಶ ಭಜಂತ್ರಿ, ಹುಸೇನಪ್ಪಾ ಗಡ್ಡದವರ, ಶಿವರಾಜ ಕಡೆಮನಿ, ಲಕ್ಷ್ಮಣ ಶೇಷಗಿರಿ, ಶ್ರೀಮತಿ ಮೇನಕಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಡಿಡಿಎಲ್ ಆರ್ ರುದ್ರಗೌಡ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ ಜಿ, ಡಿಯುಡಿಸಿ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ