14.7 C
New York
Friday, May 9, 2025

Buy now

spot_img

ಮಹಾಯೋಗಿ ವೇಮನರ ತತ್ವ ಸಿದ್ದಾಂತಗಳನ್ನು ಎಲ್ಲರು ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಿಸೋಣ :ಎಚ್ ಕೆ ಪಾಟೀಲ

ಗದಗ :  ಜನೇವರಿ 19 : ಮಹಾಯೋಗಿ ವೇಮನ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರುಗಳ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಸಚಿವ ಡಾ.ಎಚ್.ಕೆ. ಪಾಟೀಲ ಅವರು ಹೇಳಿದರು.

ನಗರದ ಶಿವಾನಂದ ಕಲ್ಯಾಣ ಮಂಟಪದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗದಗ ಜಿಲ್ಲಾ ರೆಡ್ಡಿ ಸಮಾಜ ಸಂಘ ಇವರುಗಳ ಸಹಯೋಗದಲ್ಲಿ ಜರುಗಿದ ಮಹಾಯೋಗಿ ವೇಮನರ 613ನೇ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೇಮನರ ಜಯಂತಿಯನ್ನು ಕರ್ನಾಟಕ ತುಂಬೆಲ್ಲಾ ಆಚರಣೆ ಮಾಡಬೇಕು ಎಂದು ವಿಶೇಷ ಪ್ರೇರಣೆ ನೀಡಿದವರಲ್ಲಿ ಗದಗ ಜಿಲ್ಲೆಯವರ ಪಾತ್ರ ಅಪಾರವಿದೆ, ವೇಮನ ಸಾಹಿತ್ಯ ಹಾಗು ಅವರ ಇತಿಹಾಸ ದಕ್ಷಿಣ ಕರ್ನಾಟಕದ ಭಾಗದವರಿಗೆ ಪರಿಚಯವೇ ಇಲ್ಲದಂತ ಸಂದರ್ಭದಲ್ಲಿ ಸಹಕಾರಿ ಭೀಷ್ಮ ಕೆ.ಎಚ್.ಪಾಟೀಲ ಹಾಗು ಹಲವಾರು ಅನೇಕ ಹಿರಿಯರು ಇತಿಹಾಸವನ್ನು ಹೆಕ್ಕಿ ತೆಗೆದು ವೇಮನ ಅವರ ಇತಿಹಾಸ ಸಾಹಿತ್ಯವನ್ನು ಪರಿಚಯಿಸಿ ಜನೇವರಿ 19 ನ್ನು ವೇಮನ ಜಯಂತಿ ಆಚರಣೆ ಮಾಡಿ ಕರ್ನಾಟಕ ತುಂಬಾ ಅವರ ಸಿದ್ದಾಂತವನ್ನು ತಲುಪಿಸೇಕು ಎಂದು ನಿರ್ಣಯ ಮಾಡಿದರು.

ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ರೆಡ್ಡಿ ಭಾಂದವರು ವಿಶೇಷವಾಗಿ ಗದಗ, ಕೊಪ್ಪಳ, ಬಾಗಲಕೋಟಿ ಜಿಲ್ಲೆ ಸೇರಿದಂತೆ ಅನೇಕ ಜನರು ಪಾಲ್ಗೋಂಡು ವೇಮನ ಹಾಗು ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಒಳಗೊಂಡಂತೆ ಇತರೆ ಬೇಡಿಕೆಗಳನ್ನು ಇಟ್ಟಾಗ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಅವುಗಳನ್ನು ಕೆಲವೇ ತಿಂಗಳುಗಳಲ್ಲಿ ಅನುಷ್ಠಾನ ಮಾಡಿದರು ಎಂದರು.

ರೆಡ್ಡಿ ಸಮಾಜದವರು ಎಲ್ಲಾ ಪಕ್ಷಗಳಲ್ಲಿದ್ದು ಜಾತಿ ಆಧಾರದ ಮೇಲೆ ರಾಜಕೀಯ ಮಾಡದೇ ಯೋಗ್ಯತೆ ಸೇವೆ ಸಾಮರ್ಥ್ಯ ತಕ್ಕಂತೆ ಗೌರವವನ್ನು ಪಡೆದು ಎಲ್ಲಾ ಸಮಾಜದವರನ್ನು ಅಪ್ಪುಕೊಳ್ಳುವ ಮನಸ್ಥಿತಿ ಹೊಂದಿ ,ಶೋಷಣೆ ವಿರುದ್ದ ನ್ಯಾಯಕ್ಕಾಗಿ ಹೋರಾಟ ಮಾಡುವ ಮನಸ್ಸನ್ನು ಹೊಂದಿದವರಾಗಿದ್ದಾರೆ ಎಂದು ಹೇಳಿದರು

ವೇಮನರು ಕೃಷಿಕರ ಮತ್ತು ಗೇಣುದಾರರ ಪರವಾಗಿ ಹೋರಾಟ ಮಾಡಿದ್ದಾರೆ ಇಂದು ಸಂವಿಧಾನದಲ್ಲಿರುವ ಸಮಾನತೆಗಳಂತ ಮೌಲ್ಯಗಳನ್ನು ಅಂದೇ ಅಳವಡಿಸಿ ಸಮಾಜದಲ್ಲಿ ಒಗ್ಗಟ್ಟನ್ನು ತಂದಿದ್ದಾರೇ ಎಂದು ಹೇಳಿದರು

ಮಹಾಯೋಗಿ ವೇಮನ ಅವರ ಜಯಂತಿಯನ್ನು ಎಲ್ಲರು ಸಂಘಟಿತರಾಗಿ ಸುಂದರವಾಗಿ ವಿಶೇಷವಾಗಿ ಆಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸಂತಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ ಮಾತನಾಡಿ, ಸಮಾಜ ಮನುಕುಲದ ಉದ್ದಾರಕ್ಕಾಗಿ ಜೀವನವನ್ನು ತ್ಯಾಗ ಮಾಡಿದ್ದಕ್ಕಾಗಿ ಮಹಾಯೋಗಿ ವೇಮನರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ವೇಮನರು 15 ನೇ ಶತಮಾನದಲ್ಲಿ ಕವಿತೆಗಳನ್ನು ರಚಿಸಿದರು. ಅವುಗಳಲ್ಲಿ ಅಪಾರ ಪ್ರಮಾಣದಲ್ಲಿ ನಶಿಸಿ ಹೋಗಿವೆ. ಒಬ್ಬ ಬ್ರಿಟೀಷ್ ಅಧಿಕಾರಿ ತಾಳೆಗರಿಯಲ್ಲಿ ಬರೆದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದರು ಎಂದರು.

ವೇಮನರು ದುಷ್ಚಟಕ್ಕೆ ದಾಸರಾಗಿರುತ್ತಾರೆ, ಅವರನ್ನು ಸರಿದಾರಿಗೆ ತಂದವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರು. ಅವರಿಂದ ವೇಮನರು ಪರಿವರ್ತನೆ ಹೊಂದಿ, ಸಮಾಜ ಸುದಾರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಗಾಧ ಸಾಧನೆ ಮಾಡಿದ್ದಾರೆ ಎಂದು ಮಹಾಯೋಗಿ ವೇಮನರು ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜೀವನ ಸಾಧನೆಗಳನ್ನು ಕೊಂಡಾಡಿದರು.

ರೆಡ್ಡಿ ಸಮಾಜದ ಅಭಿವೃದ್ಧಿಗಾಗಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಶೇಖಣ್ಣ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನಿಯರಿಗೆ ಸತ್ಕರಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ ಎಸ್ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಮಾಜಿ ಸಚಿವ ಬಿ ಆರ್ ಯಾವಗಲ, ಕೆ ವಿ ಹಂಚಿನಾಳ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಎಸಿ ಗಂಗಪ್ಪ ಸೇರಿದಂತೆಗ

ಗಣ್ಯರು ಉಪಸ್ಥಿತರಿದ್ದರು.ಶಿವನಗೌಡರ ಸ್ವಾಗತಿಸಿದರು, ಬಾಹುಬಲಿ ಜೈನ್ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ