ಗದಗ ಫೆಬ್ರುವರಿ 18 : ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳಿಗೆ ಸಂಬAಧಿಸಿದAತೆ ರಾಜ್ಯ ಸರಕಾರವು ಸುಗ್ರೀವಾಜ್ಞೆ ಹೊರಡಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸದರಿ ಸುಗ್ರೀವಾಜ್ಞೆಯನ್ನು ಜಾರಿಗೆ ತರುವ ಕುರಿತು ದಿನಾಂಕ:20-02-2025 ರಂದು ಮುಂಜಾನೆ 10 ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಸದರಿ ಸಭೆಗೆ ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿದಾರರು, ಗಿರವಿದಾರರು, ಹಣಕಾಸು ಸಂಸ್ಥೆಗಳು, ತಮ್ಮ ಸಂಸ್ಥೆಗೆ ಸಂಬAಧಿಸಿದ ವ್ಯವಹಾರದ ಕುರಿತು ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಲು ತಿಳಿಸಿದೆ. ಸಭೆಗೆ ಹಾಜರಾಗದ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿದಾರರು, ಗಿರವಿದಾರರು, ಹಣಕಾಸು ಸಂಸ್ಥೆಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಸಿ.ಎನ್.ಶ್ರೀಧರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.