ಚೆನ್ನೈ: ಐಪಿಎಲ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. 197 ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 146 ರನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು