14.7 C
New York
Friday, May 9, 2025

Buy now

spot_img

ಗದಗ : ಸಿಕ್ಕ ಅವಕಾಶ ಪ್ರಾಮಾಣಿಕತೆಯಿಂದ ನಿರ್ವಹಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸೋಣ

ಗದಗನಲ್ಲಿ‌ ಪೊಲೀಸ್ ದ್ವಜ‌ ದಿನಾಚರಣೆ

ಗದಗ: ಪೊಲೀಸ್‌ ಅಂದರೆ ಶಿಸ್ತಿನ ಇಲಾಖೆ. ನಮಗೆ ಸಿಕ್ಕಿರುವ ಅವಕಾಶವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡಬಹುದು. ಗದಗ ಜಿಲ್ಲಾ ಪೊಲೀಸ್‌ ಅಂದರೆ ಹೆಮ್ಮೆಯ ಪೊಲೀಸ್‌ ಎಂದಾಗಬೇಕು. ಆ ರೀತಿಯಲ್ಲಿ ನಮ್ಮ ಕಾರ್ಯನಿರ್ವಹಣೆ ಇರಬೇಕು ಎಂದು ನಿವೃತ್ತ ಪಿಎಸ್‌ಐ ಎಚ್‌.ಎಚ್.ನೀಲಗುಂದ ಹೇಳಿದರು.

ಮಲ್ಲಸಮುದ್ರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್‌ ಧ್ವಜ ದಿನಾಚರಣೆ, ನಿವೃತ್ತ ಪೊಲೀಸರ ಸೇವಾ ಸ್ಮರಣೆ ಹಾಗೂ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಕರ್ತವ್ಯ ನಿರ್ವಹಿಸುತ್ತಾರೆ. ಅಪರಾಧ ತಡೆಗಟ್ಟಲು ಹಾಗೂ ಅಪರಾಧ ಪತ್ತೆ ಹಚ್ಚಲು ಬದ್ಧತೆಯಿಂದ ಕೆಲಸ ನಿರ್ವಹಿಸುವ ಪೊಲೀಸ್‌ ಸಿಬ್ಬಂದಿಗೆ ಸರ್ಕಾರ ಇನ್ನೂ ಹೆಚ್ಚಿನ ಸವಲತ್ತುಗಳನ್ನು ಒದಗಿಸಬೇಕು. ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಆಶಿಸಿದರು. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, 1965 ರಿಂದ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದ್ದು, ಪ್ರಸಕ್ತ ವರ್ಷವೂ ಏಪ್ರಿಲ್ 2ರಂದು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಲ್ಲಿ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿ ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಶ್ರಮಿಸುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಈ ಸಮಯದಲ್ಲಿ ಸ್ಮರಿಸಿಕೊಳ್ಳಲು ಹಾಗೂ ನಿವೃತ್ತಿ ನಂತರ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ವರ್ಷ ಪೊಲೀಸ್‌ ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಶೇ 50ರಷ್ಟು ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮನಿಧಿಗೆ ಮತ್ತು ಶೇ 50ರಷ್ಟು ಹಣವನ್ನು ಕೇಂದ್ರ ನಿವೃತ್ತ ಪೊಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡ‌ಲಾಗುತ್ತದೆ. ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವೈದ್ಯಕೀಯ ವೆಚ್ಚಕ್ಕೆ ವಿನಿಯೋಗಿಸಲಾಗುತ್ತದೆ ಎಂದು ತಿಳಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮನಿಧಿ ಸಮಿತಿ ಸಭೆ ಕರೆದು, ಕುಂದು ಕೊರತೆಗಳನ್ನು ಆಲಿಸಲಾಗುವುದು. ಪ್ರಸಕ್ತ ವರ್ಷ3.28 ಲಕ್ಷ ಹಣವನ್ನು ವೈದ್ಯಕೀಯ ಧನಸಹಾಯ ಹಾಗೂ ಮರಣ ಹೊಂದಿದ ನಿವೃತ್ತ ಪೊಲೀಸ್‌ ಅಧಿಕಾರಿಗಳ ಅಂತ್ಯ ಸಂಸ್ಕಾರಕ್ಕೆ ₹1.10 ಲಕ್ಷ ನೀಡಲಾಗಿದೆ ಎಂದು ತಿಳಿಸಿದರು.

ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಗದಗ ಜಿಲ್ಲಾ ಪೊಲೀಸ್‌ ಮುಂಚೂಣಿಯಲ್ಲಿದೆ. ಜಿಲ್ಲಾ ಪೊಲೀಸ್‌ ಸಿಬ್ಬಂದಿ ಇದೇರೀತಿ ಹೆಚ್ಚಿನ ಕೆಲಸ ಮಾಡಿ ಸಾರ್ವಜನಿಕರಿಂದ ಗೌರವ ಗಳಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ.ಸಂಕದ ವೇದಿಕೆಯಲ್ಲಿದ್ದರು. ಡಿವೈಎಸ್‌ಪಿ ಪ್ರಭುಗೌಡ ಕಿರೆದಳ್ಳಿ ವಂದಿಸಿದರು. ಎಂ.ಟಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

ಸರ್ಕಾರಿ ಅಭಿಯೋಜನರು, ಸಮುದಾಯ ರಕ್ಷಕರ ಸೇವೆ ಸ್ಮರಣೀಯ

ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಕರಣಗಳಿಗೆ ಶಿಕ್ಷೆ ಆಗುತ್ತಿದೆ. ಇದರಿಂದಾಗಿ, ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿಗಳ ಶ್ರಮಕ್ಕೆ ಬೆಲೆ ಸಿಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಅಭಿಯೋಜಕರ ಕಾರ್ಯ ಸ್ಮರಣೀಯ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ ತಿಳಿಸಿದರು.

ಗಂಭೀರ ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಮರಣ ದಂಡನೆ ಹಾಗೂ ಜೀವಾವಧಿ ಶಿಕ್ಷೆ ಆಗುತ್ತದೆ. ಸರ್ಕಾರಿ ಅಭಿಯೋಜಕರಾದ ಸವಿತಾ ಎಂ.ಶಿಗ್ಲಿ, ಮಲ್ಲಿಕಾರ್ಜುನಗೌಡ ಎಂ.ದೊಡ್ಡಗೌಡರ, ಅಂಬರೀಷ್‌ ಹಿರೇಮಠ ಅವರ ಪ್ರಾಮಾಣಿಕ ಸೇವೆಯಿಂದಾಗಿ ಅನೇಕ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಇಂತಹ ಶಿಕ್ಷೆಗಳು ಪ್ರಕಟವಾಗಿದೆ. ಅದಕ್ಕಾಗಿ ಗದಗ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಈ ಮೂವರು ಸರ್ಕಾರಿ ಅಭಿಯೋಜಕರನ್ನು ಗೌರವಿಸಲಾಗುತ್ತಿದೆ ಎಂದರು.

ಅದೇರೀತಿ, ಜಿಲ್ಲೆಯಲ್ಲಿ ಅಪರಾಧಗಳ ಪತ್ತೆಗೆ ಥರ್ಡ್‌ ಐ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಜತೆಗೆ ಕೆಲವೊಂದು ಸಂದರ್ಭದಲ್ಲಿ ಖಾಸಗಿ ಸಿಸಿಟಿವಿ ಫೂಟೇಜ್‌ಗಳಿಂದಾಗಿ ಕೊಲೆ ಹಾಗೂ ದರೋಡೆ ಪ್ರಕರಣಗಳನ್ನು ಭೇದಿಸಲು ಸಾಧ್ಯವಾಗಿದೆ. ಹೀಗೆ ಅಪರಾಧ ಪತ್ತೆಗೆ ನೆರವಾದ ಸಾರ್ವಜನಿಕರಿಗೆ ಸಮುದಾಯ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು.

ಸಮುದಾಯ ರಕ್ಷರ ಪ್ರಶಸ್ತಿ ಪಡೆದ ಸಾರ್ವಜನಿಕರು 

ಶಾಶ್ವತ್‌ ಹೆಬಸೂರ, ಶಶಿ ಸಂಕಣ್ಣವರ, ಮೇಘರಾಜ ತೋಟಗಂಟಿ, ಡಾ. ಅರುಣಾ ಮಾಲಿ, ಅಭಿನಂದನ್‌ ಪಾಟೀಲ, ಅಶೋಕ ಹೊಳಕಣ್ಣವರ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ