ತುಳಿತಕ್ಕೆ ಒಳಗಾದ ವರ್ಗದವರಿಗೆ ಬೆನ್ನೆಲುಬಾಗಿ ನಿಂತ ಡಾ.ಬಾಬು ಜಗಜೀವನರಾಮ್
ಗದಗ ಏಪ್ರಿಲ್ 5 : ತುಳಿತಕ್ಕೆ ಒಳಗಾದ ವರ್ಗದವರಿಗೆ ಬೆನ್ನೆಲಬುಗಾಗಿ ನಿಂತ ಡಾ. ಬಾಬು ಜಗಜೀವನರಾಮ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಒಬ್ಬರು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಬಾಬು ಜಗಜೀವನರಾಮ್ ಅವರ 118 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ನಮ್ಮ ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿಯಾಗಿದ್ದ ಡಾ.ಬಾಬು ಜಗಜೀವನರಾಮ್ ಅವರು ಕೃಷಿ ಸಚಿವರಾಗಿ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟವರು ಹಾಗೂ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. ಸಮಾಜ ಸುಧಾರಣೆಗಾಗಿ ಡಾ. ಬಾಬು ಜಗಜೀವನರಾಮ್ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.