ಗದಗ 17: ಗೌರವಾನ್ವಿತ ಲೋಕಾಯುಕ್ತರು , ಲೋಕಾಯುಕ್ತ ಬೆಂಗಳೂರು ಮತ್ತು ಅಪರ ಪೊಲೀಸ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ ಅಧಿಕಾರಿಗಳು ಏಪ್ರಿಲ್ 23 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಳಗುಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಭವನ ಮುಳಗುಂದದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ ಉಪಾಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.