ಗದಗ : ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಬೀದಿ ನಾಯಿಗಳ ದಾಳಿಗೆ ಪ್ರೇಮವ್ವ ಚೋಳಿನ (52) ಸಾವನ್ನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ. ಹೂವು ತರಲು ಹೋಗಿದ್ದಾಗ ಪ್ರೇಮವ್ವ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದು, ಚಿಕಿತ್ಸೆ ಫಲಿಸದೇ ಪ್ರೇಮವ್ವ ಸಾವನ್ನಪ್ಪಿದ್ದಾರೆ.
ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.