ಗದಗ ಜುಲೈ 11: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಜುಲೈ 12 ಹಾಗೂ 13 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಪರಿಷ್ಕೃತ ಪ್ರವಾಸ ವಿವರ ಇಂತಿದೆ.
ಜುಲೈ 12 ರಂದು ಬೆಳಿಗ್ಗೆ 07.30 ಗಂಟೆಗೆ ಹುಬ್ಬಳ್ಳಿಯಿಂದ ಗದಗಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ವಿವೇಕಾನಂದ ಸಭಾಭವನದಲ್ಲಿ ಯುವಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಸ್ತವ್ಯ ಮಾಡುವರು.
ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ಹಳೇ ಕೋರ್ಟ್ ಹಿಂಬಾಗದ ಡಿಸಿಮಿಲ್ ರಸ್ತೆಯಲ್ಲಿ ಏರ್ಪಡಿಸಿದ ಗದಗ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಭೂಮಿ ಪೂಜೆ ಕಾರ್ಯಕ್ರಮ ಹಾಗೂ ಹುಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿಗಳು, ಶೌಚಾಲಯ, ಗ್ರಂಥಾಲಯ ಹಾಗೂ ಇತರೆ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬೆಳಿಗ್ಗೆ 10:30 ಗಂಟೆಗೆ ಗದಗ ಬೆಟಗೇರಿ ಹೆಲ್ತಕ್ಯಾಂಪನಲ್ಲಿ ಶ್ರೀ.ಶಂಕರಮಠ ಸೇವಾ ಸಮಿತಿ (ರಿ) ಗದಗ ಜಿಲ್ಲಾ ಇವರು ನಿರ್ಮಾಣ ಮಾಡಿರುವ ಸಮುದಾಯ
ಭವನದ ಮೊದಲನೇ ಮಹಡಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ನಿಜ ಸುಖಿ ಸಮುದಾಯ ಭವನ, ಶ್ರೀನಗರ ಕಾಮತರ ಲೆಔಟ್ ನಲ್ಲಿ ಏರ್ಪಡಿಸಿದ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಗದಗ ಅವರಿಂದ ಹಡಪದ ಶ್ರೀ ಅಪ್ಪಣ್ಣನವರ 891ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಗ್ಗೆ 11:30 ಗಂಟೆಗೆ ಗದಗ ನಗರದ ಡಾ. ಬಿಆರ್ ಅಂಬೇಡ್ಕರ್ ಸಭಾಭವನದಲ್ಲಿ ಗದಗ ಜಿಲ್ಲಾ ಚನ್ನದಾಸರ ಸಮಾಜ ಬಾಂಧವರಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.