ಗದಗ ಜುಲೈ 11: ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಸಲೀಂ ಅಹ್ಮದ್ ಅವರು ಜುಲೈ 12 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ :
ಜುಲೈ 12 ರಂದು ಬೆಳಿಗ್ಗೆ 8.43 ಗಂಟೆಗೆ ಗದುಗಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಗದಗನ ಎಪಿಎಂಸಿ ಯಾರ್ಡದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾದ ಕೃಷ್ಣಗೌಡ ಎಚ್. ಪಾಟೀಲ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ಗಂಟೆಗೆ ಗದುಗಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.