ಗದಗ ( ಜುಲೈ 22 : ಕೃಷಿ ಸಂಸ್ಕರಣೆ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರಿಗೆ ತಾಡಪತ್ರಿಗಳ ವಿತರಣೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ರೈತರು ಆಧಾರ ಕಾರ್ಡ, ಜಮೀನಿನ ಉತಾರ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಸದರ ಅರ್ಜಿ ಸಲ್ಲಿಸಲು ಅಗಸ್ಟ 14 ಕೊನಯ ದಿನವಾಗಿರುತ್ತದೆ. ನಿಗದಿತ ಅವಧಿಯೊಳಗೆ ಅರ್ಜಿಯನ್ನು ಸಂಬAಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಲು ಕೋರಲಾಗಿದೆ.
ಈ ಹಿಂದಿನ ಮೂರು ವರ್ಷಗಳಲ್ಲಿ ತಾಡಪತ್ರಿಗೆ ಸಹಾಯಧನ ಪಡೆದ ರೈತರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳ ಪರಿಶೀಲನೆ ನಂತರ ದಿ:20-08-2025 ರಂದು ಅವಶ್ಯಕತೆ ಅನುಸಾರ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಗದಗ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಗದಗ ಜುಲೈ 22 : 2025-26 ನೇ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಸತಿ ನಿಲಯಗಳಲ್ಲಿ ಪಿ.ಯು.ಸಿ. ಮತ್ತು ಪಿ.ಯು.ಸಿ. ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ SHP ( State Hostel Portal ) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೋಷಕರು/ ವಿದ್ಯಾರ್ಥಿಗಳು ವೆಬ್ ಸೈಟ್ ವಿಳಾಸ https://shp.karnataka.gov.in ಮೂಲಕ ಅಗಸ್ಟ 2 ರೊಳಗೆ ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.
ಮುಳಗುಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಗಮನಕ್ಕೆ
ಗದಗ ಜುಲೈ 22: ಮುಳಗುಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ 2025-26 ನೇ ಸಾಲಿನ ಎಸ್.ಎಫ್.ಸಿ. 5 % ಹಾಗೂ ಸಾಮಾನ್ಯ ನಿಧಿ ಶೇ 24.10 ಹಾಗೂ ಶೇ 5 ಘಟಕದ ವೈಯಕ್ತಿಕ ಕಾರ್ಯಕ್ರಮದಡಿ ಅನುದಾನವನ್ನು ಕಾಯ್ದಿರಿಸಲಾಗಿದ್ದು ಈ ಅನುದಾನಕ್ಕನುಗುಣವಾಗಿ ಕಾರ್ಯಕ್ರಮಗಳಿಗೆ ವೈಯಕ್ತಿಕ ಸವಲತ್ತುಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಗಸ್ಟ 10 ಸಂಜೆ 5 ಗಂಟೆಯೊಳಗಾಗಿ ಭರ್ತಿ ಮಾಡಿದ ನಮೂನೆಯೊಂದಿಗೆ ಅವಶ್ಯಕ ದೃಢೀಕರಿಸಿದ ದಾಖಲೆಗಳೊಂದಿಗೆ ಅರ್ಜಿಯನ್ನು ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿದೆ. ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಮುಳಗುಂದ ಪಟ್ಟಣ ಪಂಚಾಯತ್ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.