9.2 C
New York
Thursday, November 13, 2025

Buy now

spot_img

ಗದಗ : ಸಾಂಕ್ರಾಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಜಿಲ್ಲಾ ಕಣ್ಗಾವಲು ಸಮಿತಿ ಸಭೆ

ಗದಗ ಸೆಪ್ಟೆಂಬರ್ 1: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಡೆಂಗ್ಯೂ, ಚುಕ್ಯುನ್ ಗುನ್ಯಾ ರೋಗಗಳ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಗದಗ ಜಿಲ್ಲೆಯು ಕೂಡ ಕೆಎಫ್‌ಡಿ ಬಾಧಿತ ಎಂಡಮಿಕ್ ಜಿಲ್ಲೆಗಳಲ್ಲಿ ಒಂದಾಗಿದ್ದು, ಕೆಎಫ್‌ಡಿ ವೈರಸ್‌ನಿಂದ ಸೋಂಕಿತಗೊAಡ ಉಣ್ಣೆಯು ಕಚ್ಚುವುದರಿಂದ ಹರಡುವ ವೈರಲ್ ಜ್ವರವಾಗಿದೆ. ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಬಾರದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿರುತ್ತದೆ. ಜಿಲ್ಲೆಯಿಂದ ಈಗಾಗಲೇ 76 ರಕ್ತದ ಮಾದರಿಗಳನ್ನು ಹಾಗೂ 26 ಟಿಕ್‌ಪೂಲ್ ಮಾದರಿಗಳನ್ನು ಕೆಎಫ್‌ಡಿ ವೈರಸ್ ಪತ್ತೆಗಾಗಿ ವಿಡಿಎಲ್ ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಎಲ್ಲ ರಕ್ತದ ಮಾದರಿಗಳು ಹಾಗೂ ಟಿಕ್‌ಪೂಲ್ ಮಾದರಿಗಳ ಫಲಿತಾಂಶ ನೆಗೆಟಿವ್ ಎಂದು ವರದಿಯಾಗಿವೆ. 2024 ರಲ್ಲಿ 8 ಟಿಕ್‌ಪೂಲ್‌ಗಳನ್ನು ಕಳುಹಿಸಿದ್ದು ಎಲ್ಲವೂ ನೆಗೆಟಿವ್ ಎಂದು ವರದಿಯಾಗಿವೆ. ಇಲ್ಲಿಯವರೆಗೆ ಯಾವುದೇ ಮಂಗಗಳ ಸಾವಿನ ವರದಿಯಾಗಿರುವುದಿಲ್ಲ. ನವೆಂಬರ್ ತಿಂಗಳಿನಿAದ ಜೂನ್ ತಿಂಗಳವರೆಗೂ ರೋಗ ಪ್ರಸರಣವಾಗುವ ಸಮಯವಿರುವುದರಿಂದ ತಾಲೂಕಾ ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಕೆಎಫ್‌ಡಿ ಕುರಿತು ಸಭೆ ನಡೆಸುವುದು. ಕೆಎಫ್‌ಡಿ ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯ. ವಿಶೇಷವಾಗಿ ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆ ಮುಖ್ಯವಾಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಜನೆವರಿ 2025 ರಿಂದ ಜುಲೈ 2025 ರವೆಗೆ ಒಟ್ಟು 2499 ಕರುಳು ಬೇನೆ ಪ್ರಕರಣಗಳು, 2064 ಟೈಫೈಡ್ ಪ್ರಕರಣಗಳು. 22 ಹೆಪಟೈಟೀಸ್ –ಎ, 61 ಡೆಂಗೀ ಪ್ರಕರಣಗಳು ವರದಿಯಾಗಿವೆ. ಜನೆವರಿ 2025 ರಿಂದ ಜುಲೈ 2025 ರವರೆಗೆ ಒಟ್ಟು 206679 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು ಅದರಲ್ಲಿ 3 ಖಚಿತ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 5988 ನಾಯಿ ಕಡಿತ ಹಾಗೂ 926 ಇತರೇ ಪ್ರಾಣಿಗಳ ಕಡಿತ ವರದಿಯಾಗಿವೆ ಎಂದರು.

ರಾಷ್ಟಿçÃಯ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಿಂದ ಪ್ರತಿ ತಿಂಗಳು 50 ಉಪ್ಪು ಮಾದರಿಗಳು ಹಾಗೂ 25 ಮೂತ್ರದ ಮಾದರಿಗಳನ್ನು ಸಂಗ್ರಹಿಸಿ ಅಯೋಡಿನ್ ಅಂಶದ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಇಲ್ಲಿಯವರೆಗೂ ಗದಗ ಜಿಲ್ಲೆಯಿಂದ 2025 ರಲ್ಲಿ ಒಟ್ಟು 351 ಉಪ್ಪಿನ ಮಾದರಿಗಳು ಹಾಘೂ 176 – ಮೂತ್ರದ ಮಾದರಿಗಳನ್ನು ಅಯೋಡಿನ್ ಪರೀಕ್ಷೆಗೆ ಕಳುಹಿಸಿ ಕೊಡಲಾಗಿತ್ತು. ಎಲ್ಲ ಮೂತ್ರದ ಮಾದರಿಗಳು ಸಹಜ ಎಂದು ವರದಿಯಾಗಿವೆ. ಅದರಲ್ಲಿ 3 ಉಪ್ಪಿನ ಮಾದರಿಗಳು < 15ಪಿಪಿಎಂ ಎಂದು ವರದಿಯಾಗಿವೆ. ಜಿಲ್ಲೆಯಲ್ಲಿ 2025 ರಲ್ಲಿ ಜುಲೈ ಅಂತ್ಯದವರೆಗೆ ಲೆಪ್ಟೋಸ್ಪಿರೋಸಿಸ್ 05 ಪ್ರಕರಣಗಳು ವರದಿಯಾಗಿರುತ್ತವೆ ಎಂದು ಡಾ.ವೆಂಕಟೇಶ ರಾಠೋಡ ಸಭೆಗೆ ವಿವರಿಸಿದರು.

ಸಭೆಯಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ( SಃPಅ), ರಾಷ್ಟಿçÃಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ, ಇಲಿ ಜ್ವರ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಕರಿಗೌಡ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ.ಭಜಂತ್ರಿ, ಡಾ. ರಾಜೇಂದ್ರ ಬಸರಿಗಿಡದ, ಡಾ.ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news