8.7 C
New York
Thursday, November 13, 2025

Buy now

spot_img

ಗದಗ : ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಶೇ. 50 ಸಹಾಯಧನ ಲಭ್ಯ

ಪಿಎಂಎಫ್‌ಎAಇ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ

ಗದಗ ಸೆಪ್ಟೆಂಬರ್ 17 : ಆತ್ಮನಿರ್ಭರ ಭಾರತ ಅಭಿಯಾನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎAಇ) ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿ ನೀಡುವ ಸಹಾಯಧನ ಯೋಜನೆಯಾಗಿದೆ. ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಅವಕಾಶವಿರುತ್ತದೆ. ಬ್ಯಾಂಕ್ ಸಾಲದೊಂದಿಗೆ ಶೇ 50 ರಷ್ಟು ಸಹಾಯಧನ, ಗರಿಷ್ಟ 15 ಲಕ್ಷಗಳವರೆಗೆ ಸಹಾಯಧನವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ( ಆತ್ಮ) , ರಾಷ್ಟಿçÃಯ ಖಾದ್ಯ ತೈಲ ಅಭಿಯಾನ ಮತ್ತು ಕೆಪೆಕ್ ಲಿಮಿಟೆಡ್ ಬೆಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಪಿಎಂಎಫ್‌ಎAಇ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ವಿಚಾರ ಮಾಡಿ ಆದುನಿಕ ತಂತ್ರಜ್ಷಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗಲಾರದು ಎಂದರು.

ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ಮಾಡುವ ಸಂದರ್ಭದಲ್ಲಿ ಕೃಷಿ ವಿಶ್ವ ವಿದ್ಯಾಲಯದ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ ಪಡೆದುಕೊಳ್ಳುವುದು ಮುಖ್ಯವಾಗಿದೆ. ಆತ್ಮ ನಿರ್ಭರ ಯೋಜನೆಯ ಲಾಭವನ್ನು ಎಲ್ಲ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ಬೇಕರಿ ಉದ್ದಿಮೆ, ಖಾರ ಪುಡಿ ತಯಾರಿಕೆ ಹೊಸ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರಾರಂಭಿಸಲು ಪ್ರೊಜೆಕ್ಟ್ ತಯಾರಿಸಿ ಕೃಷಿ ಇಲಾಖೆಗೆ ಸಲ್ಲಿಸಿದಾಗ ಸೂಕ್ತ ಮಾರ್ಗದರ್ಶನದಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಈ ಕಾರ್ಯಾಗಾರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ ಪಿಎಂಎಫ್‌ಎAಇ ಒಂದು ಉಪಯುಕ್ತವಾದ ಯೋಜನೆಯಾಗಿದೆ. ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್ ಗಳು ಸಹಕರಿಸುತ್ತವೆ. ಬೇಡಿಕೆಗನುಸಾರವಾಗಿ ರೈತರು ಬೆಳೆ ಬೆಳೆದು ಮಾರುಕಟ್ಟೆಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರೈತರಿಗೆ ಅಭಿನಂದನಾ ಪತ್ರ , ಉದ್ದಿಮೆದಾರರಿಗೆ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಪಿಎಂಎಫ್‌ಎAಇ ಯೋಜನೆಯ ಫಲಾನುಭವಿಗಳ ಯಶಸ್ಸಿನ ಕುರಿತು ( ಸಕ್ಸೆಸ್ ಸ್ಟೋರಿ ) ಕಿರುಚಿತ್ರ ಪ್ರದರ್ಶನ ಜರುಗಿತು. ಉದ್ದಿಮೆದಾರರಾದ ಮುಳಗುಂದದ ರಾಜೇಶ್ವರಿ ಬಡ್ನಿ, ವಾಸುದೇವ ಇಲ್ಲೂರು ಹಾಗೂ ಇತರರು ತಮ್ಮ ಅನುಭವಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊAಡರು.

ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಉಪಾಧ್ಯಕ್ಷ ಹೂವಣ್ಣವರ, ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಅರಹುಣಸಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವೀರೇಂದ್ರ ಪಾಟೀಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಂತೋಷ ಎಂ, ಕೆಪೆಕ್ ಸಂಸ್ಥೆಯ ವಿಘ್ನೇಶ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಹುಲಗಣ್ಣವರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕೃಷಿ ವಿಜ್ಞಾನ ಕೇಂದ್ರದ ವಿನಾಯಕ ಸೇರಿದಂತೆ ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಅಧಿಕಾರಿಗಳು, ಹಾಜರಿದ್ದರು.

ಕಾರ್ಯಕ್ರಮದ ಸ್ಥಳದಲ್ಲಿ ಸಿರಿಧಾನ್ಯಗಳಿಂದ ರಚಿಸಿದ ರಂಗೋಲಿಯು ಜನರ ಕಣ್ಮನ ಸೆಳಯಿತು. ಪಿಎಂಎಫ್‌ಎAಇ ಯೋಜನೆ ಫಲಾನುಭವಿಗಳಿಂದ ಉದ್ದಿಮೆಗಳ ಉತ್ಪನ್ನದ ಗಾಣದ ಎಣ್ಣೆ, ಅವಲಕ್ಕಿ, ಖಾರ ಪುಡಿ, ಖಡಕ್ ರೊಟ್ಟಿ, ಶೇಂಗಾ ಚಟ್ನಿ, ವಿವಿಧ ಆಹಾರ ಉತ್ಪನ್ನಗಳ ಮಾರಾಟ ಮಳಿಗೆಗಳು ಜನರನ್ನು ಆಕರ್ಷಿಸಿದವು.

ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಸ್ವಾಗತಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಸೀಮಾ ಸವಣೂರ ಕಾರ್ಯಕ್ರಮ ನಿರೂಪಿಸಿದರು. ಉಪ ಕೃಷಿ ನಿರ್ದೇಶಕಿ ಶ್ರೀಮತಿ ಸ್ಪೂರ್ತಿ ಜಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news