ಗದಗ ೦೩: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಕಲ್ಯಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನಮಂತ್ರಿಗಳ ಹೊಸ ೧೫ ಅಂಶ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಒಂದನೆ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯು ಪ್ರಾರಂಭಗೊAಡು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಯೋಜನೆಯಡಿ ಬರುವ ಒಟ್ಟು ೨೨ ಇಲಾಖೆ ಪ್ರಗತಿ ಪರಿಶೀಲಿಸಿ ಇಲಾಖೆಗಳ ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟ ಆರ್ಥಿಕ ಹಾಗೂ ಬೌದ್ಧಿಕ ಸೌಲಭ್ಯಗಳ ಅರ್ಹರರಿಗೆ ಪ್ರಯೋಜನೆ ಪಡೆಯಲು ಸಹಕರಿಸಬೇಕು.
ಅಲ್ಪಸಂಖ್ಯಾತರ ಜಿಲ್ಲಾಧಿಕಾರಿಗಳಾದ ಅಮಿತ ಬಿದರಿ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿಯ ಸಭೆ ಪ್ರಗತಿ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭಿಸಿ ವಿವಿಧ ಇಲಾಖೆಗಳ ವರದಿಯನ್ನು ಜಿಲ್ಲಾ ಸಮಿತಿಯ ಸದಸ್ಯರಿಗೆ ಮಾಹಿತಿ ತಿಳಿಸಲು ಸಹಾಯ ಮಾಡಿದರು. ಸಭೆಯಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾನ್ಯ ಜಿಲ್ಲಾಧಿಕಾರಿಗಳು ನಿರ್ದಿಷ್ಟ ಯೋಜನೆಗಳಿಗೆ ಸಂಬAಧಿಸಿದAತೆ ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕೆಂದು ಸೂಚಿಸಿದರು. ಜಿಲ್ಲಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಮಾತನಾಡಿ ಶಾಲೆಯಲ್ಲಿರುವ ಸಮಸ್ಯೆ, ಮೂಲಭೂತ ಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟದ ಬಗ್ಗೆ ಗಮನಹರಿಸಿ ಸೌಲಭ್ಯಗಳನ್ನು ದೊರಕುವಂತೆ ವಿನಂತಿ ಮಾಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಮಟ್ಟದ ನಾಮ ನಿರ್ದೇಶಿತ ಸದಸ್ಯರು ಹಾಜರಿದ್ದರು.