9.9 C
New York
Saturday, October 18, 2025

Buy now

spot_img

ಗದಗ : ಅರ್ಜಿ ಆಹ್ವಾನ

ಗದಗ  ಅಕ್ಟೋಬರ್ 17 : ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯನ್ನು ಆಚರಿಸಲು ಉದ್ದೇಶಿಸಿದೆ. ಸದರಿ ಕಾರ್ಯಕ್ರಮದ ಮೂಲಕ ಮಂಡಳಿಯ ಕಾರ್ಯಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವ ಜೊತೆಗೆ ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಕೈಗಾರಿಕೋದ್ಯಮಿಗಳು, ಪರಿಸರ ವಾದಿಗಳು, ವಿದ್ಯಾರ್ಥಿಗಳು, ಜನ ಪ್ರತಿನಿಧಿಗಳು, ಸರ್ಕಾರಿ ಇಲಾಖೆ ಅಧಿಕಾರಿ/ಸಿಬ್ಬಂಧಿಗಳು, ಸಂಘ ಸಂಸ್ಥೆಗಳು ಹಾಗೂ ಇತರೆ ಭಾಗಿದಾರರ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಪರಿಸರ ಪ್ರಶಸ್ತಿ ಅರ್ಜಿ ಆಹ್ವಾನ ನೀಡಲಾಗಿದ್ದು ಗದಗ ಜಿಲ್ಲೆಯಲ್ಲಿ ಪರಿಸರ ಸಂರAಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದ್ದು ಅರ್ಜಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಿಖಿಲ್‌ರೆಡ್ಡಿ ಬಿಲ್ಡಿಂಗ್ ಪ್ಲಾಟ್‌ನಂ:15 ಸಿ.ಡಿ.ಒ ಜೈನ್ ಸ್ಕೋಲ್ ರೋಡ ,ಮುಳಗುಂದ ನಾಕಾ ಪೋಸ್ಟ್ ಕಛೇರಿ ಹತ್ತಿರ ಹುಬ್ಬಳ್ಳಿ ರೋಡ, ಗದಗ, ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ನಿಖಿಲ್ ರೆಡ್ಡಿ ಬಿಲ್ಡಿಂಗ್ , ಸಿ.ಡಿಓ ಜೈನ್ ಸ್ಕೂಲ್ ರೋಡ, ಗದಗ ಇಲ್ಲಿ ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news