21 C
New York
Sunday, October 19, 2025

Buy now

spot_img

ಗದಗ : ಜಿಲ್ಲಾ ಮಟ್ಟದ ಯುವಜನೋತ್ಸವ-2025

ಜೀವನ ಕೌಶಲ್ಯ ತರಬೇತಿ ಮತ್ತು ಯುವ ಕಾರ್ಯಾಗಾರ

ಗದಗ  ಅಕ್ಟೋಬರ 18 : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ನಿಮ್ಹಾನ್ಸ್ , ಬೆಂಗಳೂರು, ನೆಹರು ಯುವ ಕೇಂದ್ರ , ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಲಾಯನ್ಸ್ ಶಿಕ್ಷಣ ಸಂಸ್ಥೆ, ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯ ಇವರುಗಳ ಸಹಯೋಗದಲ್ಲಿ ಗದಗ ಜಿಲ್ಲಾ ಮಟ್ಟದ ಯುವಜನೋತ್ಸವ -2025 ಜೀವನ ಕೌಶಲ್ಯ ತರಬೇತಿ ಮತ್ತು ಯುವ ಕಾರ್ಯಾಗಾರವನ್ನು ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮುಂಡರಗಿ ರಸ್ತೆಯಲ್ಲಿನ ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಕರ್ನಾಟಕ ರಾಜ್ಯ ವಿಕೇಂದೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಲಾಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆನಂದ ಪೋತ್ನೀಸ್ , ಲಾಯನ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜೆ.ಸಿ. ಶಿರೋಳ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷ ರವಿಕಾಂತ ಅಂಗಡಿ ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ ಆಗಮಿಸುವರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ, ಸ್ಟುಡೆಂಟ್ ಎಜ್ಯುಕೇಶನ್ ಸೊಸೈಟಿ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಪ್ರೇಮಾನಂದ ರೋಣದ, ನಿಮಾನ್ಸ್ ಯುವ ಸ್ಪಂದನ ಕಾರ್ಯಕ್ರಮ ಕ್ಷೇತ್ರ ಸಂಯೋಜಕರಾದ ಡಾ.ನಾಗರಾಜ ಆರ್, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಶ್ರೀಮತಿ ರಂಜನಿ ಎನ್. ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಕಾರ್ಯಕ್ರಮದ ವಿವರ :ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರು ವಯಸ್ಸಿನ ದಾಖಲೆಗಳನ್ನು ಸಲ್ಲಿಸಿ ಮುಕ್ತವಾಗಿ ಭಾಗವಹಿಸಲು ಅವಕಾಶವಿದೆ.

ಸ್ಪರ್ಧೆಗಳ ವಿವರ :

• ಜನಪದ ನೃತ್ಯ ( ತಂಡ) ( 10 ಜನ ಗುಂಪು ಸ್ಪರ್ಧೆ) ;

• ಜನಪದ ಗೀತೆ ( ತಂಡ) ( 10 ಜನ ಗುಂಪು ಸ್ಪರ್ಧೆ) : ಕನ್ನಡ ಭಾಷೆ ( ಪ್ರಾದೇಶಿಕ ಭಾಷೆ)ಯಲ್ಲಿರಬೇಕು.

• ಕಥೆ ಬರೆಯುವುದು ( ವೈಯಕ್ತಿಕ ಸ್ಪರ್ಧೆ) ( 1000 ಪದಗಳಿಗೆ ಮೀರದಂತೆ ) ಕನ್ನಡ/ ಆಂಗ್ಲ/ ಹಿಂದಿ ಭಾಷೆಯಲ್ಲಿರಬೇಕು.

• ಚಿತ್ರಕಲೆ ಪೋಸ್ಟರ್ ಎ3 ಸೈಜ್ 11.7 “ * 16.5 “ ( ವೈಯಕ್ತಿಕ ಸ್ಪರ್ಧೆ) – ಚಿತ್ರಕಲೆಯನ್ನು ಸಲ್ಲಿಸುವವರು ಚಿತ್ರಕಲೆಯ ಶೀರ್ಷಿಕೆಯನ್ನು 20-30 ಪದಗಳಲ್ಲಿ ನಮೂದಿಸಬೆಕಾಗುತ್ತದೆ

• ಘೋಷಣೆ: ( ವೈಯಕ್ತಿಕ ಸ್ಪರ್ಧೆ) – ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿ ಇರಬೇಕು. ಸ್ಪರ್ಧಿಗಳು ಸಿದ್ಧಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ 7 ನಿಮಿಷಗಳ ಭಾಷಣ ಮಾಡಬೇಕು. ವಿಷಯ: ಭಾರತದಲ್ಲಿ ತುರ್ತು ಪರಿಸ್ಥಿತಿಯ ಅವಧಿ ಮತ್ತು ಸಂವಿಧಾನದ ಉಲ್ಲಂಘನೆ ಹಾಗೂ ಪ್ರಜಾಪ್ರಭುತ್ವವನ್ನು ಕಾಪಾಡುವುದು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು.

• ಕವಿತೆ ಬರೆಯುವುದು ( ವೈಯಕ್ತಿಕ ಸ್ಪರ್ಧೆ)

• ವಿಜ್ಞಾನ ಮೇಳದ ಪ್ರದರ್ಶನ ( ವೈಯಕ್ತಿಕ ಸ್ಪರ್ಧೆ )

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news