20.9 C
New York
Sunday, May 11, 2025

Buy now

spot_img

ಗದಗ : ವ್ಯಾಪಕ ಪ್ರಚಾರದ ಮೂಲಕ ಬಾಲ್ಯವಿವಾಹ ತಡೆಗಟ್ಟಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಗದಗ  ಜು24 : ಓರ್ವ ಪಾಲಕ ಹೊಂದಿದ ಮತ್ತು ಅನಾಥ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ಸೌಲಭ್ಯಗಳು ಸರಿಯಾಗಿ ತಲುಪಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ ನಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕ ಮಟ್ಟದ ವಿವಿಧ ಸಮಿತಿಯ ಸಭೆಗಳು ಕಡ್ಡಾಯವಾಗಿ ಜರಗಬೇಕು ಮತ್ತು ಬಾಲ ಮಂದಿರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು‌.

ಬಾಲ್ಯವಿವಾಹಗಳನ್ನು ತಡೆಗಟ್ಟಲು ಪ್ರೌಢ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬಾಲ್ಯವಿವಾಹದ ದುಷ್ಟರಿಣಾಮದ ಅರಿವನ್ನು ವ್ಯಾಪಕವಾಗಿ ಪ್ರಚಾರಮಾಡಬೇಕು, ಸಾಮೂಹಿಕ ಮದುವೆ ಜೊತೆಗೆ ವಯಕ್ತಿಕವಾಗಿ ನಡೆಯುವ ಮದುವೆಗಳಲ್ಲಿಯೂ ಗಮನಹರಿಸಬೇಕು. ಸಂಶಯ ಬಂದಲ್ಲಿ ಆಧಾರ ಕಾರ್ಡ್, ಶಾಲಾ ದಾಖಲಾತಿ, ವೈದ್ಯಕೀಯ ಪರೀಕ್ಷೆ ನಡೆಸಿ ಪರಿಶೀಲಿಸಬೇಕು ಎಂದರು.

ಪೊಸ್ಕೊ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಉದ್ಯಾನವನದಲ್ಲಿ, ಆಟೋ ಚಾಲಕ, ಕಾರ್ಮಿಕರಲ್ಲಿ ಕಾಯ್ದೆಯನ್ನು ತಿಳಿಸಿ ಅರಿವು ಮೂಡಿಸಬೇಕು ನಿರ್ದೇಶಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗ ಶಿವನಗೌಡ್ರ ಮಾತನಾಡಿ ಪೊಲೀಸ್ ಇಲಾಖೆಯ ಚೆನ್ನಮ್ಮ ಪಡೆಯ ಮೂಲಕ ಎಲ್ಲಾ ಠಾಣೆ ಮತ್ತು ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹವಾಗದಂತೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ರಫೀಕಾ ಸಭೆಗೆ 2023-24 ನೇ 4 ನೇ ತ್ರೈಮಾಸಿಕ ಮತ್ತು 2024-25 ನೇ ಸಾಲಿನ ನಡಾವಳಿಗಳನ್ನು ತಿಳಿಸಿದರು.

ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಭರತ್ ಎಸ್ ಮಾತನಾಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ತರುವ ಪ್ರಯತ್ನ ವಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕೆ.ಬೈಲೂರು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ ರೆಡ್ಡೆರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ!