Monday, September 16, 2024
Google search engine
Homeಗದಗಗದಗ : ಜಿಲ್ಲಾ ಕಾನಿಪದ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತೆ ಕೆ.ಎಚ್. ಸಾವಿತ್ರಿ ಆಯ್ಕೆ

ಗದಗ : ಜಿಲ್ಲಾ ಕಾನಿಪದ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತೆ ಕೆ.ಎಚ್. ಸಾವಿತ್ರಿ ಆಯ್ಕೆ

ಗದಗ: ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅವ್ವ ಸೇವಾ ಟ್ರಸ್ಟ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯ ಮಟ್ಟದಲ್ಲಿ ಮಹಿಳಾ ಪತ್ರಕರ್ತರಿಗಾಗಿ ಪ್ರಶಸ್ತಿ ನೀಡಲು ಸ್ಥಾಪಿಸಿರುವ ದತ್ತಿ ನಿಧಿಯ ‘2024ನೇ ಸಾಲಿನ ಪ್ರಶಸ್ತಿಗೆ ಹಿರಿಯ ಮಹಿಳಾ ಪತ್ರಕರ್ತೆ, ಪ್ರಸ್ತುತ ಸಿನಿ ಜೋಷ ಮಾಸಪತ್ರಿಕೆಯ ಪ್ರಧಾನ ಸಂಪಾದಕಿ ಬೆಂಗಳೂರಿನ ಶ್ರೀಮತಿ ಕೆ.ಎಚ್. ಸಾವಿತ್ರಿ ಅವರನ್ನು ಅವರನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಎಂ. ಹೆಬ್ಬಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವ್ವ ಸೇವಾ ಟ್ರಸ್ಟ್, ಈ ದತ್ತಿ ಪ್ರಶಸ್ತಿಗೆ ಶ್ರೀಮತಿ ಕೆ.ಎಚ್. ಸಾವಿತ್ರಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನವು ಜುಲೈ 28 ರಂದು ರವಿವಾರ ಗದಗನಲ್ಲಿ ವಾರ್ತಾ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಗದಗ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ರಾಜ್ಯದ ಕಾನೂನು ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ‘ಮಾಧ್ಯಮ ಚೇತನ’ ಎಂಬ ರಾಜ್ಯಮಟ್ಟದ ಪ್ರಶಸ್ತಿ ನೀಡಿ, ಗೌರವಿಸಲಿದ್ದಾರೆ.

ಆಯ್ಕೆ ಸಮಿತಿಯಲ್ಲಿ ಅವ್ವ ಸೇವಾ ಟ್ರಸ್ಟ್ ನ ಸಂಚಾಲಕ ಡಾ.ಬಸವರಾಜ ಧಾರವಾಡ, ಆಯ್ಕೆ ಸಮಿತಿಯ ಸದಸ್ಯರಾದ ಪತ್ರಕರ್ತರಾದ ಸಂಜೀವ ಪಾಂಡ್ರೆ, ಶಿವಕುಮಾರ ಕುಷ್ಟಗಿ, ಕಾನಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಂ. ಶರೀಫನವರ ಇದ್ದರು ಎಂದು ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ