Thursday, September 19, 2024
Google search engine
Homeಗದಗಗದಗ : ಎಸ್‍ಎಸ್‍ಎಲ್‍ಸಿ ಪರೀಕ್ಷೆ -3 : ಪೂರ್ವಭಾವಿ ಸಭೆ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು...

ಗದಗ : ಎಸ್‍ಎಸ್‍ಎಲ್‍ಸಿ ಪರೀಕ್ಷೆ -3 : ಪೂರ್ವಭಾವಿ ಸಭೆ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ

ಗದಗ ಜುಲೈ 28 : ಜಿಲ್ಲೆಯಲ್ಲಿ ಅಗಸ್ಟ 2 ರಿಂದ 9ರವರೆಗೆ ಜರುಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 ಯನ್ನು ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಅವರು ಮಾತನಾಡಿ ಎಸ್‍ಎಸ್‍ಎಲ್‍ಸಿ-3 ಪರೀಕ್ಷೆಯು ಅಗಸ್ಟ 2 ರಿಂದ 9 ರವರೆಗೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು ಒಟ್ಟು 1625 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಜಿಲ್ಲಾ ಕಚೇರಿಯಲ್ಲಿ ವೆಬ್‍ಕಾಸ್ಟಿಂಗ್ ಮೂಲಕ ಎಲ್ಲ ಪರೀಕ್ಷಾ ಕೇಂದ್ರಗಳ ವೀಕ್ಷಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲ ತಾಲೂಕಿನ ಬಿ.ಇ.ಓ ಕಚೇರಿಯಲ್ಲಿ ಸಹ ಸದರಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಸಬಸ್ತ, ಮಾರ್ಗಾಧಿಕಾರಿಗಳ ವಾಹನ ವ್ಯವಸ್ಥೆ , ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿರ್ಮಲಾ, ಡಯಟ್ ಪ್ರಾಚಾರ್ಯರಾದ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ- 3ರ ವೇಳಾಪಟ್ಟಿ: ಅಗಸ್ಟ 2 -ಪ್ರಥಮ ಭಾಷೆ – ಬೆ10.15 ರಿಂದ ಮ 1.30 ರವರೆಗೆ, ಅಗಸ್ಟ 3-ತೃತೀಯ ಭಾಷೆ – ಬೆ 10.15 ರಿಂದ ಮ. 1.15 ರವರೆಗೆ / ಎನ್‍ಎಸ್‍ಕ್ಯೂಎಫ್ ವಿಷಯಗಳು – ಬೆ 10.15 ರಿಂದ ಮ.12.30 ಗಂಟೆಗೆ, ಅಗಸ್ಟ 5- (ಕೋರ್ ಸಬ್ಜೆಕ್ಟ್ )ವಿಜ್ಞಾನ, ರಾಜ್ಯ ಶಾಸ್ತ್ರ ಬೆ 10.15 ರಿಂದ ಮ. 1.30 ರವೆಗೆ, ಹಿಂದೂಸ್ಥಾನಿ ಸಂಗೀತ ,ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ- ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ, ಅಗಸ್ಟ್ 6- (ಕೋರ್ ಸಬ್ಜೆಕ್ಟ್) ಸಮಾಜ ವಿಜ್ಞಾನ- ಬೆ 10.15 ರಿಂದ ಮ. 1.30 ರವರೆಗೆ, ಅಗಸ್ಟ 7 – ಇಂಗ್ಲೀಷ್, ಕನ್ನಡ – ಬೆ 10.15 ರಿಂದ ಮ. 1.15 ರವರೆಗೆ, ಅಗಸ್ಟ 8- ( ಕೋರ್‍ಸಬ್ಜೆಕ್ಟ್ ), ಗಣಿತ, ಸಮಾಜ ಶಾಸ್ತ್ರ – ಬೆ 10.15 ರಿಂದ ಮ. 1.30 ರವರೆಗೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು