Thursday, September 19, 2024
Google search engine
Homeಉದ್ಯೋಗಗದಗ : ನಗರಾಭಿವೃದ್ಧಿ ಪ್ರಾಧಿಕಾರದಿಂದ ಶಿಸ್ತಿನಿಂದಿರುವ ಸುಂದರ ನಗರ ನಿರ್ಮಾಣವಾಗಲಿ : ಎಚ್.ಕೆ.ಪಾಟೀಲ್

ಗದಗ : ನಗರಾಭಿವೃದ್ಧಿ ಪ್ರಾಧಿಕಾರದಿಂದ ಶಿಸ್ತಿನಿಂದಿರುವ ಸುಂದರ ನಗರ ನಿರ್ಮಾಣವಾಗಲಿ : ಎಚ್.ಕೆ.ಪಾಟೀಲ್

ಗದಗ ಜು.29: ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾನೂನು ನಿಯಮಗಳನ್ವ ,ಶಿಸ್ತು ಬದ್ಧವಾಗಿ ಸುಂದರ ಮತ್ತು ಶೋಷಣೆ ಮುಕ್ತ ನಗರ ನಿರ್ಮಾಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಕೆ.ಪಾಟೀಲ್ ಅವರು ಹೇಳಿದರು.

ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಭವನದಲ್ಲಿ ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗದಗ ನಗರದ ನಿರ್ಮಾಣವು ತನ್ನದೆಯಾದ ಇತಿಹಾಸವನ್ನು ಹೊಂದಿದೆ ನಗರಾಭಿವೃದ್ಧಿ ಪ್ರಾಧಿಕಾರದ ಮಹತ್ವದ ಮತ್ತು ಜವಾಬ್ದಾರಿ ಕೆಲಸವನ್ನು ಹೊಂದಿದೆ ಅದನ್ನು ಶಿಸ್ತಿನಿಂದ ಪಾಲಿಸಬೇಕು ಎಂದರು.

ಅಭಿವೃದ್ಧಿ ಕೆಲಸಗಳಿಗೆ ನಗರದಲ್ಲಿ ಸಾಕಷ್ಟು ಅವಕಾಶಗಳಿವೆ ಪ್ರಾಧಿಕಾರದಿಂದ ಉತ್ತಮ ಮತ್ತು ಸೂಕ್ತ ಕೆಲಸಗಳನ್ನು ಮಾಡುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಬೃಹತ್ತಾಕಾರದ ಉದ್ಯಾನವನಗಳು ನಿರ್ಮಾಣವಾಗಬೇಕು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗುವಂತ ಸ್ಥಳಗಳನ್ನು ಗುರುತಿಸಿ, ಸುಂದರವಾದ ಉದ್ಯಾನವನಗಳು ನಿರ್ಮಾಣಗೊಳಿಸಿ ನಗರವನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಕಾರ್ಯಪ್ರವೃತ್ತರಾಗಬೇಕು ಎಂದರು.

ಕಾನೂನು ಬಾಹಿರವಾಗಿ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣಗೊಳ್ಳುವ ಕಟ್ಟಡಗಳನ್ನು ಮೊದಲ ಹಂತದಲ್ಲಿಯೇ ಗುರುತಿಸಿ ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಅಂದಾಗ ಮಾತ್ರ ವೈಜ್ಞಾನಿಕ ವಾಗಿ ನಗರ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಎಸ್.ಸಿ. ಬೇವೂರು ಅವರು ಸಭೆಯ ನಡಾವಳಿಗಳನ್ನು ಸಲ್ಲಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ ಮಾತನಾಡಿ, ನಗರದ ಭೀಷ್ಮ ಕೇರಿ ಬಹಳ ಪ್ರಮುಖ್ಯತೆ ಹೊಂದಿದ್ದು ಅದನ್ನು ನಿರ್ವಹಿಸುವ ಮತ್ತು ಉತ್ತಮವಾಗಿ ಅಭಿವೃದ್ಧಿ ಪಡಿಸುವ ಕೆಲಸವಾಗಬೇಕು ಎಂದರು.

ಪ್ರಾಧಿಕಾರದ ಸದಸ್ಯರಾದ ಬಸವರಾಜ ಕಡೇಮನಿ ಅವರು ಸ್ವಾಗತಿಸಿದರು. ಸಭೆಯಲ್ಲಿ ಪ್ರಾಧಿಕಾರದ ಸದಸ್ಯರುಗಳಾದ ಜಾನಕಿ ಮಲ್ಲಾಪೂರ, ಚಂದ್ರಶೇಖರ ತಡಪದ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು