14.7 C
New York
Friday, May 9, 2025

Buy now

spot_img

ಗದಗ : ಅರ್ಜಿ ಆಹ್ವಾನ

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ  ಅಗಸ್ಟ 13: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ) ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2 ಎ, 2 ಬಿ, 3 ಎ , 3 ಬಿ ಮತ್ತು ಪ.ಜಾ/ ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನವಾಗಿರುತ್ತದೆ. ತಾಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆ ವಿವರ ಮತ್ತು ಸರ್ಕರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನಲ್ಲಿ ನೋಡಬಹುದು. ಹೆಚ್ಚಿನ ಮಾಹಿತಿಗಾಗಿ 8050770004 ಮತ್ತು 8050770005 ಸಂಪರ್ಕಿಸಬಹುದಾಗಿದೆ.

ಅರ್ಜಿ ಆಹ್ವಾನ

ಗದಗ  ಅಗಸ್ಟ 13: ಪ್ರಸಕ್ತ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಸತಿ ನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಎಸ್‌ಎಚ್‌ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ https://shp.karnataka.gov.in ಮೂಲಕ ಸೆಪ್ಟೆಂಬರ್ 12 ರೊಳಗಾಗಿ ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲ ದಾಖಲೆಗಳನ್ನು ಸಂಬAಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗದಗ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಧಿ ವಿಸ್ತರಣೆ

ಗದಗ ಅಗಸ್ಟ 13: 2024-2025 ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್, ನರಸಾಪೂರ, ಬೆಟಗೇರಿ ಗದಗ ಸಂಖ್ಯೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಮೊದಲ ವರ್ಷದ ಡಿಪ್ಲೋಮಾ ಸೀಟುಗಳಿಗೆ ಹಾಗೂ ಐ.ಟಿ.ಐ/ಪಿ.ಯು.ಸಿ (ವಿಜ್ಞಾನ) ಪಾಸಾದ ವಿದ್ಯಾರ್ಥಿಗಳಿಗೆ 3ನೇ ಸೆಮಿಸ್ಟರ್ ಲ್ಯಾಟರಲ್ ಎಂಟಿ ಸೀಟುಗಳಿಗೆ ಪ್ರಾಂಶುಪಾಲರ ಹಂತದಲ್ಲಿ ಆಫ್‌ಲೈನ್ ಮೂಲಕ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇರೆಗೆ ಡಿಪ್ಲೋಮಾ ಪ್ರವೇಶ ಪಡೆಯಲು ಅಗಸ್ಟ 23 ರವರಗೆ ಅಂತಿಮ ದಿನಾಂಕ ವಿಸ್ತರಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆ ತಿಳಿಸಿದೆ.

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ  ಅಗಸ್ಟ 13: ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗಗಳಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿರುತ್ತದೆ.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.inಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ ಸೈಟ್ ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದಾಗಿದೆ.

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ ಅಗಸ್ಟ 13: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್ ಸೈಟ್ www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ ಸೈಟ್ ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದಾಗಿದೆ.

ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ  ಅಗಸ್ಟ 13: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದ್ದು, ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಿಗಮದ ವೆಬ್‌ಸೈಟ್ www.kaad.karnataka.gov.in ಇಲ್ಲಿ ಸಂಪರ್ಕಿಸಬಹುದಾಗಿದೆ.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ  ಅಗಸ್ಟ 13 : ಕರ್ನಾಟಕ ಒಕ್ಕಲಿಗ ಸಮುದಾಯ ಅಬಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವ ವಿದ್ಯಾಲಯಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರö್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಈ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಗಸ್ಟ 30 ಕೊನೆಯ ದಿನವಾಗಿದ್ದು, ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08372-232327 ಹಾಗೂ 080-29904350, 29904268 ಸಂಪರ್ಕಿಸಬಹುದಾಗಿದೆ. ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಸಂಪರ್ಕಿಸಬಹುದಾಗಿದೆ.

ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದಿಂದ

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ  ಅಗಸ್ಟ 13: ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ ( ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ ( ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ ( ಫ್ರೆಶ್ ಸ್ಟುಡೆಂಟ್ಸ್ ), ಅರಿವು ಶೈಕ್ಷಣಿಕ ಸಾಲ ಯೋಜನೆ ( ರಿನ್ಯೂವಲ್ ), ರಾಜಶ್ರೀ ಶಾಹು ಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ( ಫ್ರೆಶ್ ಸ್ಟುಡೆಂಟ್ಸ್ ), ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದ್ದು ಯೋಜನೆಗಳ ಮಾರ್ಗಸೂಚಿ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ https://kmcdc.karnataka.gov.in ಇಲ್ಲಿ ಸಂಪರ್ಕಿಸಬಹುದಾಗಿದೆ.

ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಗದಗ ಅಗಸ್ಟ 12: ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜನೀಯರಿAಗ್, ಸಾರ್ವಜನಿಕ ವ್ಯವಹಾರ, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷನ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2025 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https:padmaawards.gov.in ರಲ್ಲಿ ಲಭ್ಯವಿರುತ್ತದೆ.

ಮೇಲೆ ಸೂಚಿಸಿದ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬAಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಅಗಸ್ಟ 26 ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ