ಟ್ರ್ಯಾಕ್ಟರ್‌ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿಗ್ಗಾಂವಿ ತಾಲೂಕಿನಲ್ಲಿ ನಡೆದಿದೆ.
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರನ್ನು ಸೆರೆವಾಡ ಗ್ರಾಮದ ಹನುಮಂತಪ್ಪ ಮುಲಗಿ (55) ಮತ್ತು ಚಂದ್ರು ಸಿರಕೋಳ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೂಲ್ವಿ ಗ್ರಾಮದಿಂದ ಟ್ರ್ಯಾಕ್ಟರ್ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಜಾತ್ರೆಗೆ ತೆರಳುತಿತ್ತು ಎನ್ನಲಾಗಿದೆ. ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರ್ ಹಿಂದಿನಿಂದ ಡಿಕ್ಕಿಯಾಗಿದೆ. ಅಪಘಾತ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ತಡಸ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.