ಕ್ರಿಕೆಟ್ ಆಟಗಾರ ಅಜಿಂಕ್ಯಾ ರಹಾನೆ ಅವರಿಂದ ಕೆ.ಎಚ್.ಪಾಟೀಲ್ ಕ್ರಿಕೆಟ್ ಲೀಗ್‌ ಗೆ ಚಾಲನೆ

ಗದಗ: ಕ್ರಿಕೆಟ್ ಜೆಂಟಲ್ ಮನ್ ಆಟವಾಗಿದ್ದು, ಸ್ಪೂರ್ತಿದಾಯಕವಾಗಿ ಆಡುವ ಮೂಲಕ ತಮ್ಮಲ್ಲಿನ ಪ್ರತಿಭೆ ತೋರ್ಪಡಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಅಜಿಂಕ್ಯಾ ರಹಾನೆ ಹೇಳಿದರು.

ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್‌ ನ ಹೊನಲು-ಬೆಳಕಿನ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗದಗ ನಗರಕ್ಕೆ ಬಂದಿರುವುದು ಖುಷಿ ತಂದಿದೆ, ಗದಗದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಶಾಸಕ ಎಚ್.ಕೆ‌. ಪಾಟೀಲ ಅವರು ಉತ್ತಮ ವೇದಿಕೆ ಒದಗಿಸಿಕೊಟ್ಟಿದ್ದಾರೆ. ಅದನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್ ನಮ್ಮ ಗದಗನಲ್ಲಿರುವ ಟ್ಯಾಲೆಂಟ್ ಹೆಕ್ಕಿ ತೆಗೆದು ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತಾಗಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅಜಿಂಕ್ಯ ರಹಾನೆ ಅವರನ್ನು ಸನ್ಮಾನಿಸಲಾಯಿತು. ಮುಂಬೈ ಸ್ಪೋರ್ಟ್ಸ್ ಕನ್ಸಲ್ಟಂಟ್ ಅಖಿಲ್ ರಾನಡೆ, ಮಹೇಂದ್ರ ಸಿಂಘೆ,ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಮುಖಂಡರಾದ ಎಂ.ಸಿ. ಶೇಖ್, ಬಿ.ಬಿ. ಅಸೂಟಿ, ಗುರಣ್ಣ ಬಳಗಾನೂರ, ಕೃಷ್ಣೇಗೌಡ ಪಾಟೀಲ, ಅಶೋಕ ಮಂದಾಲಿ, ಸರ್ಫರಾಜ್ ಶೇಖ್ ಸೇರಿ ಹಲವರು ಇದ್ದರು.

Leave a Reply

Your email address will not be published. Required fields are marked *