ಹುಬ್ಬಳ್ಳಿ: ಬಸ್ ಸ್ಟೇರಿಂಗ್ ರಾಡ್ ಕಟ್ ಆಗಿ ಐಟಿಸಿ ಕಂಪನಿಯ ಗೋಡೌನ್ ಕಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ-ಗದಗ ರಸ್ತೆಯಲ್ಲಿ ನಡೆದಿದೆ.
ಸಾರಿಗೆ ಬಸ್ ಗದಗ ಕಡೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಏಕಾಏಕಿ ಬಸ್ನ ಸ್ಟೇರಿಂಗ್ ರಾಡ್ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಗಾಯಾಳುಗಳನ್ನ ಆಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.