ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಆದೇಶ ಹೊರಡಿಸಿದೆ.
ರಾಜ್ಯದ ಪ್ರತಿ ಗ್ರಾಮಪಂಚಾಯತ್ ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಆದೇಶಿಸಿದ್ದು, ಪ್ರತಿ ಗ್ರಾಮಪಂಚಾಯಿತಿಗೆ ಎರಡರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದರು.
ಅದರಂತೆ ಇದೀಗ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಪ್ರತಿ ಗುಂಪಿಗೆ 10 ಸಾವಿರ ರೂ. ನಿಧಿ, 1 ಲಕ್ಷ ರೂ. ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲಸೌಲಭ್ಯ ಒದಗಿಸಲಾಗುತ್ತದೆ. ಸ್ಥಳೀಯ ಬೇಡಿಕೆಗಳನ್ನು ಆಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.