ಗದಗ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ ಸಮಿತಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಕಲಚೇತನರಿಂದ ಮತದಾನ ಜಾಗೃತಿಗಾಗಿ ರವಿವಾರ ಬೈಕ ಜಾಥಾ ಹಮ್ಮಿಕೊಳ್ಳಲಾಗಿತ್ತು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ಮಹಾಂತೇಶ ಬೈಕ್ ಜಾಥಾ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಲಲಿತಾ ಅಳವಂಡಿ ಸೇರಿದಂತೆ ವಿಕಲಚೇತನರು ರ್ಯಾಲಿಯಲ್ಲಿ ಭಾಗವಹಿಸಿ ಮತದಾನದ ಮಹತ್ವ ಹಾಗೂ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ ಎಂದು ಅರಿತು ಎಲ್ಲರೂ ಮತದಾನ ದಿನದಂದು ತಪ್ಪದೇ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡೋಣ.ಸದೃಢ ಸಶಕ್ತ ಪ್ರಜಾ ಪ್ರಭುತ್ವ ನಿರ್ಮಿಸಲು ನಾವೆಲ್ಲ ಮುಂದಾಗೋಣ. ದೇಶದ ಪ್ರಜಾ ಪ್ರಭುತ್ವದಲ್ಲಿ ಮತದಾರರು ಸರ್ವಬೌಮ. ಅರ್ಹರಿಗೆ ನಮ್ಮ ಹಕ್ಕು ಚಲಾಯಿಸೋಣ ಸುಭದ್ರ ಸರ್ಕಾರ ರಚನೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ ಎಂಬುದನ್ನು ಸಾರುವ ಬೈಕ್ ಜಾಥಾ ಯಶಸ್ವಿಯಾಗಿ ಸಾಗಿತು. ಬೈಕ್ ಜಾಥಾ ಬೆಟಗೇರಿಯ ಹಾಕಿ ಸ್ಟೇಡಿಯಂನಿಂದ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬೆಟಗೇರಿ ಬಸ ನಿಲ್ದಾಣ ತಲುಪಿ ಮುಕ್ತಾಯಗೊಂಡಿತು.